Nainar Nagendran: ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಆಯ್ಕೆ

ಚೆನ್ನೈ: ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ತಮಿಳುನಾಡಿನ ತಿರುನಲ್ವೇಲಿ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ರಾಜ್ಯಾಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ರಾಜ್ಯ ಉಪಾಧ್ಯಕ್ಷರಾಗಿರುವ ನಾಗೇಂದ್ರನ್ ಅವರು ಈ ಹಿಂದೆ ಎಐಎಡಿಎಂಕೆಯಲ್ಲಿದ್ದರು. ಟಿ.ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯದಲ್ಲಿ ನಾಪಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿಯಾಗಿದ್ದಾರೆ.
ಈ ಹಿಂದೆ ಎಐಎಡಿಎಂಕೆಯಲ್ಲಿದ್ದ ಹಿನ್ನೆಲೆ ನಾಗೇಂದ್ರನ್ ಅವರ ರಾಜ್ಯಾಧ್ಯಕ್ಷ ಸ್ಥಾನವು ಎರಡೂ ಪಕ್ಷಗಳ ನಡುವೆ ಮೈತ್ರಿ ಮಾಡಲು ಉತ್ತಮ ವಾತಾವರಣವನ್ನ ಸೃಷ್ಟಿ ಮಾಡಲಿದೆ ಎನ್ನಲಾಗಿದೆ.
ಇತ್ತೀಚೆಗೆ ತಮಿಳುನಾಡು ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿತ್ತು. ಇದರ ಬೆನ್ನಲ್ಲೇ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ, ತಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅಣ್ಣಾಮಲೈ ಅವರನ್ನು ಎಐಎಡಿಎಂಕೆ ನಾಯಕರ ಒತ್ತಾಯದ ಮೇರೆಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಜೆಪಿ ಹೈಕಮಾಂಡ್ ಕೆಳಗಿಳಿಸಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ಅಣ್ಣಾಮಲೈ ನೀಡಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: