ಬಸ್ಸಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದಲ್ಲದೇ ಕಂಡಕ್ಟರ್ ಗೂ ನಿಂದನೆ: ಬಿಜೆಪಿ ಮುಖಂಡೆ ರಂಜನಾ ನಾಚಿಯಾರ್ ಅರೆಸ್ಟ್

05/11/2023

ಸರ್ಕಾರಿ ಬಸ್ ಮೆಟ್ಟಿಲಲ್ಲಿ ನಿಂತು ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದ ತಮಿಳುನಾಡು ಬಿಜೆಪಿ ಮುಖಂಡೆ ಹಾಗೂ ನಟಿ ರಂಜನಾ ನಾಚಿಯಾರ್ ಅವರನ್ನು ಬಂಧಿಸಲಾಗಿದೆ.

ಕಾಂಚೀಪುರಂನ ಕುಂದ್ರತ್ತೂರು ಎಂಬಲ್ಲಿ ಸರ್ಕಾರಿ ಬಸ್‌ನಲ್ಲಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿದ್ಯಾರ್ಥಿಗಳಿಗೆ ಥಳಿಸಿದ್ದಲ್ಲದೇ ಸರ್ಕಾರಿ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ರಂಜನಾ ನಾಚಿಯಾರ್ ಅವರನ್ನು ಬಂಧಿಸಲಾಗಿದೆ.

ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಪ್ರಯಾಣಿಸುತ್ತಿರುವುದನ್ನು ಗಮನಿಸಿದ ರಂಜನಾ ನಾಚಿಯಾರ್ ಅವರು ಬಸ್ ನಿಲ್ಲಿಸಿ ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿದ್ದಕ್ಕಾಗಿ ಚಾಲಕನ ಮೇಲೆ ಹರಿಹಾಯ್ದರು. ನಂತರ ಅವಳು ಹೋಗಿ ವಿದ್ಯಾರ್ಥಿಗಳನ್ನು ಬಸ್ಸಿನಿಂದ ಇಳಿಯುವಂತೆ ಕೇಳಿದಳು. ಅಲ್ಲದೇ ಅವರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದಳು. ಬಸ್ಸಿನಿಂದ ಹೊರಬರಲು ನಿರಾಕರಿಸಿದ ವಿದ್ಯಾರ್ಥಿಗಳನ್ನು ನಾಚಿಯಾರ್ ಕಪಾಳಮೋಕ್ಷ ಮಾಡಿ ಹೊಡೆಯಲು ಪ್ರಾರಂಭಿಸಿದ್ದಾರೆ. ಇದರ ನಂತರ ಅವರು ಬಸ್ ಕಂಡಕ್ಟರ್ ಜೊತೆ ವಾಗ್ವಾದ ನಡೆಸಿದರು. ಇದರಿಂದಾಗಿ ಬಿಜೆಪಿ ಮುಖಂಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ರಂಜನಾ ನಾಚಿಯಾರ್ ಬಸ್‌ ತಡೆದು ವಿದ್ಯಾರ್ಥಿಗಳಿಗೆ ಥಳಿಸಿ ಕೆಳಗಿಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಕಾಂಚೀಪುರಂನ ಮಾಂಗಾಡು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಂಜನಾ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 341,323, 353 ಮತ್ತು 75ಜೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಂಜನಾ ಅವರನ್ನು ಅವರ ಮನೆಯಿಂದಲೇ ಬಂಧಿಸಿದ್ದಾರೆ. ಬಳಿಕ ಶ್ರೀಪೆರಂಬಂದೂರಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ಇತ್ತೀಚಿನ ಸುದ್ದಿ

Exit mobile version