ತಮಿಳುನಾಡಿನಂತೆ ಕರ್ನಾಟಕದಲ್ಲಿಯೂ ಪೆಟ್ರೋಲ್ ಬೆಲೆ ಇಳಿಕೆಯಾಗುತ್ತಾ? | ಸಿಎಂ ಬೊಮ್ಮಾಯಿ ಹೇಳಿದ್ದೇನು?
ಬೆಂಗಳೂರು: ತಮಿಳುನಾಡಿನಲ್ಲಿ ಎಂ.ಕೆ.ಸ್ಟ್ಯಾಲಿನ್ ನೇತೃತ್ವದ ಸರ್ಕಾರ ಜನತೆಯ ಹೊರೆ ಇಳಿಸಲು ಪೆಟ್ರೋಲ್ ಗೆ ಮೂರು ರೂಪಾಯಿಗಳನ್ನು ಇಳಿಕೆ ಮಾಡಿದೆ. ಈ ನಡುವೆ ಕರ್ನಾಟಕದಲ್ಲಿ ಕೂಡ ಪೆಟ್ರೋಲ್ ಬೆಲೆ ಇಳಿಕೆಗೆ ಸರ್ಕಾರ ಮುಂದಾಗಬೇಕು ಎನ್ನುವ ಒತ್ತಾಯ ಕೇಳಿ ಬಂದಿತ್ತು.
ಆದರೆ ಇದೀಗ ರಾಜ್ಯದ ಜನತೆಗೆ ನಿರಾಸೆಯಾಗಿದ್ದು, ತಮಿಳುನಾಡಿನಂತೆಯೇ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ ಎಂದು ವರದಿಯಾಗಿದ್ದು, ರಾಜ್ಯದ ಜನರು ಪೆಟ್ರೋಲ್ ಗೆ ದುಬಾರಿ ಹಣವನ್ನು ತೆರಲೇ ಬೇಕಾಗಿದೆ.
ಕಾಂಗ್ರೆಸ್ ರಾಜ್ಯದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕೇಂದ್ರದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದರೆ, ರಾಜ್ಯ ಸರ್ಕಾರ ಬೆಲೆ ಇಳಿಕೆ ಮಾಡಿ ಜನರ ಹೊರೆ ತಪ್ಪಿಸಬಹುದು ಎಂದು ಹೇಳಿಕೆ ನೀಡುತ್ತಿದ್ದರು. ಆದರೆ, ಇದೀಗ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿದೆ. ಜನರ ಹೊರೆಯನ್ನು ಕಡಿಮೆ ಮಾಡಲು ಸರ್ಕಾರ ಯಾಕೆ ಮುಂದಾಗುತ್ತಿಲ್ಲ ಎಂದು ಜನ ಪ್ರಶ್ನಿಸುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು…
ಚಲಿಸುತ್ತಿದ್ದ ಬಸ್ಸಿನ ಮೇಲೆ ಬಿದ್ದ ತೆಂಗಿನ ಮರ | ಕ್ಷಣ ಮಾತ್ರದಲ್ಲೇ ಮರದಲ್ಲಿದ್ದ ಎಳೆನೀರು ಖಾಲಿ!
ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆ | ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಕೆ
ಕಮಿಷನರ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ: ಕೊನೆಯ ಸಂದೇಶದಲ್ಲಿತ್ತು ಮನಕಲಕುವ ನೋವು
ಸಣ್ಣ ಮೀನುಗಳು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ
ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ | ಸಾಕು ಬಾರಕ್ಕೋ… ಎಂದ ಕಾರ್ಯಕರ್ತರು!
ಸ್ವಾತಂತ್ರ್ಯ ದಿನಾಚರಣೆ: ಗಾಂಧಿ, ಭಗತ್ ಸಿಂಗ್, ಅಂಬೇಡ್ಕರರನ್ನು ನೆನೆದ ಪ್ರಧಾನಿ ನರೇಂದ್ರ ಮೋದಿ