ತಮಿಳುನಾಡಿನಲ್ಲಿ ಶಾಲೆಗಳಲ್ಲಿ ಹವಾಮಾನ ಬದಲಾವಣೆ ಶಿಕ್ಷಣ ನೀತಿ: ಎಂ.ಕೆ.ಸ್ಟಾಲಿನ್ ಹೇಳಿಕೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಂಗಳವಾರ ರಾಜ್ಯದಲ್ಲಿ ಹವಾಮಾನ ಬದಲಾವಣೆ ಶಿಕ್ಷಣ ನೀತಿಯನ್ನು ಪರಿಚಯಿಸಲಾಗುವುದು ಮತ್ತು ತಮಿಳುನಾಡಿನಾದ್ಯಂತ ಶಾಲೆಗಳಲ್ಲಿ ಪರಿಸರ ಕ್ಲಬ್ ಗಳನ್ನು ರಚಿಸಲಾಗುವುದು ಎಂದು ಘೋಷಿಸಿದ್ದಾರೆ.
“ಹವಾಮಾನ ಬದಲಾವಣೆಯು ಮಾನವ ಸಮಾಜ ಮತ್ತು ಪ್ರಪಂಚದಾದ್ಯಂತದ ರಾಷ್ಟ್ರಗಳು ಎದುರಿಸುತ್ತಿರುವ ಅತಿದೊಡ್ಡ ಸವಾಲಾಗಿದೆ. ಹೀಗಾಗಿ ನಾವು ನಿರಂತರವಾಗಿ ಅದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಮತ್ತು ಅದನ್ನು ನಿಭಾಯಿಸಲು ಕ್ರಮಗಳನ್ನು ಜಾರಿಗೆ ತರುತ್ತಿದ್ದೇವೆ ” ಎಂದು ಚೆನ್ನೈನಲ್ಲಿ ನಡೆದ ಹವಾಮಾನ ಬದಲಾವಣೆ ಶೃಂಗಸಭೆ 3.0 ರಲ್ಲಿ ಮುಖ್ಯಮಂತ್ರಿ ಹೇಳಿದ್ದಾರೆ.
ಇನ್ನು ಈ ಕುರಿತು ಸಂಶೋಧನೆ ನಡೆಸಲು ಹವಾಮಾನ ಬದಲಾವಣೆ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಗಮನಸೆಳೆದರು ಮತ್ತು ಈ ವಿಷಯದ ಬಗ್ಗೆ ಸಮ್ಮೇಳನ ನಡೆಸಿದ ಭಾರತದ ಮೊದಲ ರಾಜ್ಯ ತಮಿಳುನಾಡು ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj