ತಮಿಳು ಸ್ಟಾರ್ ನಟ ಅಜಿತ್ ಅಪೋಲೋ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಿಗೆ ಆತಂಕ - Mahanayaka

ತಮಿಳು ಸ್ಟಾರ್ ನಟ ಅಜಿತ್ ಅಪೋಲೋ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಿಗೆ ಆತಂಕ

ajjith kumar
07/03/2024

ಚೆನ್ನೈ: ತಮಿಳು ಸ್ಟಾರ್ ನಟ ಅಜಿತ್ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಆತಂಕ್ಕೀಡಾದ ಘಟನೆ ನಡೆದಿದೆ.

ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ನಟರ ಪೈಕಿ ಅಜಿತ್ ಕೂಡ ಒಬ್ಬರು. ಇಂದು ಬೆಳಗ್ಗಿನಿಂದಲೇ ಅಜಿತ್ ಅವರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಕಾಡ್ಗಿಚ್ಚಿನಂತೆ ತಮಿಳುನಾಡಿನಾದ್ಯಂತ ಸುದ್ದಿ ಹರಿದಾಡಿದೆ. ಅವರಿಗೆ ಏನಾಗಿದೆ ಎನ್ನುವ ಮಾಹಿತಿ ತಕ್ಷಣಕ್ಕೆ ತಿಳಿಯದೇ ಅಭಿಮಾನಿಗಳು ತೀವ್ರ ಆತಂಕಕ್ಕೀಡಾಗಿದ್ದರು.

ಆದ್ರೆ ಸಂಜೆಯ ವೇಳೆ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿದ್ದು, ಚಿತ್ರದ ಶೂಟಿಂಗ್ ಗಾಗಿ ದೂರದ ಪ್ರಯಾಣ ಇರುವ ಕಾರಣ ಅಜಿತ್ ಅವರು ರೆಗ್ಯುಲರ್ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಈ ಬಗ್ಗೆ ಅಜಿತ್ ಅವರ ಮ್ಯಾನೇಜರ್ ಸುರೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಶೂಟಿಂಗ್ ಗಾಗಿ ಅಜಿತ್ ತೆರಳುವ ಹಿನ್ನೆಲೆಯಲ್ಲಿ ನಿಯಮಿತ ತಪಾಸಣೆಗಾಗಿ ಅವರು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಚೆನ್ನಾಗಿಯೇ ಇದೆ. ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ನಿಯಮಿತ ತಪಾಸಣೆಗಾಗಿ ಒಂದೆರಡು ದಿನಗಳು ಆಸ್ಪತ್ರೆಯಲ್ಲಿ ನಿಲ್ಲಬೇಕೇ? ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ, ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ಒತ್ತಾಯಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ