ಮೀನುಗಾರ ಮಹಿಳೆಯನ್ನು ಅವಮಾನಿಸಿ ಬಸ್ ನಿಂದ ಬಲವಂತವಾಗಿ ಇಳಿಸಿದ ಕಂಡೆಕ್ಟರ್: ತಮಿಳುನಾಡು ಸಿಎಂ ಮಾಡಿದ್ದೇನು ಗೊತ್ತಾ?
ಕನ್ಯಾಕುಮಾರಿ: ಮೀನು ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದ್ದು, ಬಸ್ ನಲ್ಲಾದ ಅವಮಾನದಿಂದ ನೊಂದು ಮಹಿಳೆ ಬಸ್ ನಿಲ್ದಾಣದಲ್ಲಿಯೇ ಜೋರಾಗ ಬೊಬ್ಬಿಟ್ಟು ಅತ್ತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕನ್ಯಾಕುಮಾರಿಯ ವಾಣಿಯಕುಡಿ ಗ್ರಾಮದ ಸೆಲ್ವಮೇರಿ ಅವರು ನೊಂದ ಮೀನುಗಾರ ಮಹಿಳೆಯಾಗಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಘಟನೆಯ ಬಗ್ಗೆ ಸಾರಿಗೆ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ತಕ್ಷಣವೇ ಚಾಲಕ ಮತ್ತು ಕಂಡೆಕ್ಟರ್ ನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಮಹಿಳೆ ಬಸ್ ಗೆ ಹತ್ತಿದ ವೇಳೆ ಕಂಡೆಕ್ಟರ್ ಬಲವಂತವಾಗಿ ಮಹಿಳೆಯನ್ನು ಬಸ್ ನಿಂದ ಕೆಳಗೆ ಇಳಿಸಿದ್ದು, ಬಸ್ ಮೀನಿನಿಂದ ವಾಸನೆ ಬರುತ್ತದೆ ಎಂದು ಅವಮಾನಿಸಿದ್ದಾನೆ. ಎಲ್ಲರ ಎದುರು ಇಂತಹ ಘಟನೆ ನಡೆದಾಗ ಮಹಿಳೆ ತೀವ್ರವಾಗಿ ನೊಂದಿದ್ದು, ಬಸ್ ನಿಲ್ದಾಣದಲ್ಲಿಯೇ ಜೋರಾಗಿ ಅತ್ತಿದ್ದಾರೆ.
ಈ ಘಟನೆಯ ಬಗ್ಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟ್ಯಾಲಿನ್ ಕೂಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳೆಯರ ಅಭ್ಯುದಯಕ್ಕಾಗಿ ತಮಿಳುನಾಡು ಸರ್ಕಾರ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿರುವಾಗ, ಇಂತಹದ್ದೊಂದು ಘಟನೆ ನಡೆದಿದೆ. ಕಂಡೆಕ್ಟರ್ ನಡೆಸಿದ ಕೃತ್ಯ ಖಂಡನೀಯ. ಸಮಾಜದಲ್ಲಿ ಎಲ್ಲರೂ ಸಮಾನರು ಎನ್ನುವ ವಿಶಾಲ ಮನೋಭಾವದಿಂದ ನಾವೆಲ್ಲರೂ ಯೋಚಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸೇನಾ ವಿಮಾನ ಪತನ: 14 ಮಂದಿಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಇವರೊಬ್ಬರೇ…
ಆದಿ ಉಡುಪಿ: ಡಾ.ಬಿ.ಆರ್.ಅಂಬೇಡ್ಕರ ಅವರ 65ನೇ ಮಹಾಪರಿನಿಬ್ಬಾಣ ದಿನ ನಮನ | BSI ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಸೇನಾ ಹೆಲಿಕಾಫ್ಟರ್ ಪತನ: ಬಿಪಿನ್ ರಾವತ್ ಪತ್ನಿ ಮಧುಲಿಕಾ ಮೃತ್ಯು?, ಬಿಪಿನ್ ರಾವತ್ ಸ್ಥಿತಿ ಗಂಭೀರ!
ಮೊಟ್ಟೆ ಯೋಜನೆ ಕೈ ಬಿಡದಿದ್ದರೆ, ಬೀದಿಗಿಳಿದು ಹೋರಾಟ: ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟ
ಬಿಪಿನ್ ರಾವತ್ ಸೇರಿದಂತೆ 9 ಮಂದಿಯಿದ್ದ ಸೇನಾ ವಿಮಾನ ಪತನ: ನಾಲ್ವರ ಮೃತದೇಹ ಪತ್ತೆ, ಮೂವರ ಸ್ಥಿತಿ ಗಂಭೀರ