ತಮಿಳುನಾಡಿನಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು!
ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂವಿಧಾನ ಶಿಲ್ಪಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿದ್ದು, ಪ್ರತಿಮೆಯ ಕೈಯನ್ನು ಹಾನಿಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಲ್ಲಿನ ಒಮಲೂರು ಪಟ್ಟಣದ ಕಮಲಾಪುರ ಕಾಲನಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಹಿಂದೆ ಜಾತಿ ಪೀಡೆಗಳ ಕೈವಾಡ ವಿರುವ ಶಂಕೆ ಕೂಡ ವ್ಯಕ್ತವಾಗಿದೆ. ಹೀಗಾಗಿ ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಭಾರೀ ಪ್ರತಿಭಟನೆ ಆರಂಭಗೊಂಡಿದೆ.
ಘಟನೆಯಿಂದ ರೊಚ್ಚಿಗೆದ್ದ ಅಂಬೇಡ್ಕರ್ ಅಭಿಮಾನಿಗಳು ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಸ್ತಬ್ಧವಾಗಿತ್ತು. ಈ ವೇಳೆ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂದೆಗೆದುಕೊಳ್ಳಲಾಗಿದೆ.
ಘಟನೆಯನ್ನು ಪೊಲೀಸರು ಕೂಡ ಗಂಭೀರವಾಗಿ ಪರಿಗಣಿಸಿದ್ದು, ಸ್ಥಳೀಯ ಸಿಸಿ ಕ್ಯಾಮರಗಳನ್ನು ಪರಿಶೀಲಿಸಿ, ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ. ಈ ಪ್ರದೇಶದ ಸುತ್ತಮುತ್ತ, ಘಟನೆ ನಡೆದ ದಿನದಂದು ಜನರ ಚಲವಲನಗಳನ್ನು ಗಮನಿಸುತ್ತಿದ್ದಾರೆ. ಅನುಮಾನ ಬಂದವರನ್ನು ವಶಕ್ಕೆ ಪಡೆದು ವಿಚಾರಿಸುವ ಸಾಧ್ಯತೆಗಳಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸಮಸ್ಯೆ ಹೇಳಿಕೊಳ್ಳಲು ಬಂದವರಿಗೆ ಗದರಿದ ಮಾಜಿ ಸಿಎಂ ಸಿದ್ದರಾಮಯ್ಯ!| ಕಾರಣ ಏನು ಗೊತ್ತಾ?
ಮಠದ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಹಾವು ಕಡಿದು ಸ್ವಾಮೀಜಿ ಸಾವು!
“ಮಠಕ್ಕೆ ಬಂದು ತತ್ತಿ ತಂತೀವಿ” | ಮೊಟ್ಟೆ ವಿರೋಧಿ ಮಠಾಧೀಶರ ಬೆಂಡೆತ್ತಿದ ಮಕ್ಕಳು
ಬಿಟ್ ಕಾಯಿನ್ ಹಗರಣದ ಸೂತ್ರಧಾರ ‘ಶ್ರೀಕೃಷ್ಣ’ ಕರ್ನಾಟಕದಿಂದ ಪರಾರಿ?
ನಾಡೋಜ ಕವಿ ದಿ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು ಕಾಸರಗೋಡಿಗೆ
ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?