ಮೈಸೂರು: ಅತ್ಯಾಚಾರ ಪ್ರಕರಣ | ತಮಿಳುನಾಡಿನಲ್ಲಿ ಐವರು ಆರೋಪಿಗಳ ಬಂಧನ - Mahanayaka
5:31 PM Wednesday 5 - February 2025

ಮೈಸೂರು: ಅತ್ಯಾಚಾರ ಪ್ರಕರಣ | ತಮಿಳುನಾಡಿನಲ್ಲಿ ಐವರು ಆರೋಪಿಗಳ ಬಂಧನ

arrested
28/08/2021

ಬೆಂಗಳೂರು: ಮೈಸೂರು ಚಾಮುಂಡಿ ಬೆಟ್ಟದ ಸಮೀಪ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು  ಹೇಳಲಾಗಿದೆ.

ಘಟನೆ ನಡೆದು 85 ಗಂಟೆಗಳಲ್ಲಿ ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದು,  ತನಿಖೆಯ ವೇಳೆ ಲಭ್ಯವಾದ ತಾಂತ್ರಿಕ ಸಾಕ್ಷ್ಯಾಧಾರದ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಗಸ್ಟ್ 24ರಂದು ಈ ಘಟನೆ ನಡೆದಿದ್ದು, ಹೊರ ರಾಜ್ಯದಿಂದ ಆಗಮಿಸಿ ಮೈಸೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು  ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ಐದಾರು ಮಂದಿ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿತ್ತು. ಇದು ದೇಶಾದ್ಯಂತ ಸುದ್ದಿಯಾಗಿದ್ದು, ಜನರನ್ನು ಬೆಚ್ಚಿಬೀಳಿಸಿತ್ತು.

ಇನ್ನಷ್ಟು ಸುದ್ದಿಗಳು…

ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಆ.30ರಂದು ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ | ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ

126 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತ: ಮುಂದೆ ನಡೆದದ್ದೇನು?

ಮೈಸೂರು ಗ್ಯಾಂಗ್ ರೇಪ್: ಬಿಜೆಪಿ ಸಂಸದರ ಬೇಜವಾಬ್ದಾರಿಯ ಹೇಳಿಕೆ

ಅನಿಷ್ಟ ಕಾಮುಕರನ್ನು ಬಂಧಿಸುವ, ಶಿಕ್ಷಿಸುವ ಕಾನೂನು ಗಟ್ಟಿಯಾಗಬೇಕು | ನಟಿ ಶೃತಿ

ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ | ನಟಿ ರಮ್ಯಾ ಪ್ರಶ್ನೆ

ಇತ್ತೀಚಿನ ಸುದ್ದಿ