ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದು ನಾಲ್ವರು ವಿದ್ಯಾರ್ಥಿನಿಯರಿಗೆ ಗಾಯ! - Mahanayaka

ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದು ನಾಲ್ವರು ವಿದ್ಯಾರ್ಥಿನಿಯರಿಗೆ ಗಾಯ!

student in hospital
13/09/2021

ವಿಲ್ಲುಪುರಂ: ಶಾಲೆಯ ಪ್ರಯೋಗಾಲಯದಲ್ಲಿದ್ದ ಆ್ಯಸಿಡ್ ಬಾಟಲಿ ಒಡೆದ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಾಯಗೊಂಡ ಆತಂಕಕಾರಿ ಘಟನೆ ತಮಿಳುನಾಡಿನ ವಿಲ್ಲುಪುರಂ ಕಂದಮಂಗಲಂ ವಲ್ಲಾಲರ್ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದು, ಘಟನೆ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರನ್ನು ವಜಾ ಮಾಡಲಾಗಿದೆ.

ಗಾಯಗೊಂಡವರೆಲ್ಲ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಎಂದು ಹೇಳಲಾಗಿದೆ. ಶಾಲೆಯ ಬಳಿ ಹೆದ್ದಾರಿ ಅಗಲಿಕರಣ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ಶಾಲೆಯ ಪ್ರಯೋಗಾಲವನ್ನು ಕೆಡವಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪ್ರಯೋಗಾಲಯದಲ್ಲಿದ್ದ ರಾಸಾಯನಿಕಗಳನ್ನು ತೆಗೆದಿಡುತ್ತಿದ್ದರು ಎಂದು ಹೇಳಲಾಗಿದೆ.

ಈ ವೇಳೆ ಕಟ್ಟಡದ ಒಂದು ಭಾಗ ಕುಸಿದು ರಾಸಾಯನಿಕಗಳ ಮೇಲೆ ಬಿದ್ದಿದ್ದು, ಈ ವೇಳೆ ಆ್ಯಸಿಡ್ ವಿದ್ಯಾರ್ಥಿನಿಯರ ಮುಖ, ಕೈ ಮತ್ತು ಕುತ್ತಿಗೆಗೆ ತಾಗಿದ್ದು, ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಘಟನೆಯಿಂದ ಗಾಬರಿಗೊಂಡ ಶಿಕ್ಷಕರು ತಕ್ಷಣವೇ ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ,

ಇನ್ನೂ ವಿಚಾರ ತಿಳಿದ ವಿಲ್ಲುಪುರಂ ಜಿಲ್ಲಾಧಿಕಾರಿ ಮೋಹನ್ ವಿದ್ಯಾರ್ಥಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದು, ಸಾಂತ್ವನ ಹೇಳಿದ್ದಾರೆ. ಜೊತೆಗೆ ಮುಖ್ಯ ಶಿಕ್ಷಕರನ್ನು ವಜಾಗೊಳಿಸಿದ್ದಾರೆ. ಇನ್ನೂ ಪ್ರಯೋಗಾಲಯದಲ್ಲಿದ್ದ ಸಲ್ಫ್ಯೂರಿಕ್ ಆ್ಯಸಿಡ್ ವಿದ್ಯಾರ್ಥಿನಿಯರ ಮೈಗೆ ತಾಗಿದೆ ಎಂದು ಸದ್ಯ ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

ಇಡೀ ತೋಟವನ್ನೇ ನಾಶ ಮಾಡಿದ ಆನೆ, ಪುಟ್ಟ ಹಕ್ಕಿ ಗೂಡು ಇದ್ದ ಬಾಳೆಗಿಡವನ್ನು ಬಿಟ್ಟು ಹೋಯಿತು!

ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ | ಸಿಡಿದೆದ್ದ ಜನರು

ಅಜ್ಜಿಯ ಮನೆಗೆ ಬಂದ ಮಹಿಳೆ, ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ!

ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತುಕೊಂಡು ಓಡಾಡುತ್ತಿದ್ದ ಶೋಭಾ ಕರಂದ್ಲಾಜೆ ಇಗೆಲ್ಲಿದ್ದಾರಪ್ಪಾ? | ಸಿದ್ದರಾಮಯ್ಯ ಪ್ರಶ್ನೆ

“ಮಗಳನ್ನು ಹೇಗಾದರೂ ಬದುಕಿಸಿ” ಎಂದು ಅತ್ತು ಗೋಗರೆದರೂ ಬಾಗಿಲು ತೆರೆಯದ ಆಸ್ಪತ್ರೆ | 5 ವರ್ಷದ ಬಾಲಕಿ ಸಾವು

ಪ್ರಾಣ ಸ್ನೇಹಿತರು ಜೊತೆಯಾಗಿ ಪ್ರಾಣ ಬಿಟ್ಟರು: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದು ಪ್ರಾಣಕ್ಕೆ ಕುತ್ತು ತಂದಿತು!

ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬಳೆ ಇಟ್ಟು, ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

 

ಇತ್ತೀಚಿನ ಸುದ್ದಿ