ನಿಲ್ಲಿಸಿದ್ದಲ್ಲಿಂದ ಮುಂದಕ್ಕೆ ಚಲಿಸಿ ಮಗುಚಿ ಬಿದ್ದ ಗ್ಯಾಸ್ ತುಂಬಿದ ಟ್ಯಾಂಕರ್!

gas tanker
25/01/2025

ಉಪ್ಪಿನಂಗಡಿ: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಆಕಸ್ಮಿಕವಾಗಿ ಮುಂದೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ನಡೆದಿದೆ.
ಇಲ್ಲಿನ ಮಂಗಳೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹದ್ದೊಂದು ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಆದರೆ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ ಹಿನ್ನೆಲೆ ಭಾರೀ ಅನಾಹುತ ತಪ್ಪಿದಂತಾಗಿದೆ.

ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ತಮಿಳುನಾಡಿನ ಕಡೆಗೆ ಪ್ರಯಾಣ ಬೆಳೆಸಿತ್ತು, ಟ್ಯಾಂಕರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ, ಚಾಲಕ ಕನಕರಾಜು ಬೊಳ್ಳಾರು ಬಳಿ ಟ್ಯಾಂಕರ್ ನಿಲ್ಲಿಸಿ ಮೆಕ್ಯಾನಿಕ್ ನ್ನು ಕರೆದುಕೊಂಡು ಬರಲು ತೆರಳಿದ್ದರು ಎನ್ನಲಾಗಿದೆ.

ಇದೇ ವೇಳೆ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ, ಹೆದ್ದಾರಿ ಬದಿ ಮಗುಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಅಗ್ನಿಶಾಮಕ ದಳ ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ

Exit mobile version