ಸೊಸೆಗೆ ಮಕ್ಕಳಾಗುತ್ತಿಲ್ಲ ಎಂದು ತನ್ನಿಬ್ಬರು ಪುತ್ರರಿಂದ ಅತ್ಯಾಚಾರ ನಡೆಸಿದ ಪಾಪಿ ಅತ್ತೆ! - Mahanayaka
8:01 PM Wednesday 11 - December 2024

ಸೊಸೆಗೆ ಮಕ್ಕಳಾಗುತ್ತಿಲ್ಲ ಎಂದು ತನ್ನಿಬ್ಬರು ಪುತ್ರರಿಂದ ಅತ್ಯಾಚಾರ ನಡೆಸಿದ ಪಾಪಿ ಅತ್ತೆ!

uttar pradesh
05/06/2022

ಲಕ್ಕೋ: ಸೊಸೆಗೆ ಮಕ್ಕಳಾಗುತ್ತಿಲ್ಲವೆಂದು ಪಾಪಿ ಅತ್ತೆಯೊಬ್ಬಳು ಸೊಸೆಯಿದ್ದ ಕೋಣೆಗೆ ತನ್ನ ಮತ್ತಿಬ್ಬರ ಪುತ್ರರಿಬ್ಬರನ್ನು ಕಳುಹಿಸಿ ಅತ್ಯಾಚಾರ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಮಹಿಳೆಗೆ ಮೂವರು ಗಂಡು ಮಕ್ಕಳಿದ್ದು, ಓರ್ವ ಮಗನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ಆಕೆ ತನ್ನ ಸೊಸೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಳು. ಸೊಸೆ ಮಲಗಿದ್ದ ಸಂದರ್ಭದಲ್ಲಿ ತನ್ನ ಇಬ್ಬರು ಪುತ್ರರನ್ನು ಆಕೆಯ ಕೋಣೆಗೆ ಕುಳಹಿಸಿ, ಆಕೆಯ ಮೇಲೆ ಅತ್ಯಾಚಾರ ಮಾಡಲು ತನ್ನ ಪುತ್ರರಿಗೆ ಹೇಳಿದ್ದು, ಅಂತೆಯೇ, ತಮ್ಮ ಅತ್ತಿಗೆ ಎಂದೂ ನೋಡದೇ ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿದೆ.

ಘಟನೆಯ ಬಳಿಕ ಸೊಸೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ದೂರಿನಲ್ಲಿ ನನ್ನ ಪತಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮೈದುನರಿಬ್ಬರು 2 ದಿನ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಉಲ್ಲೇಖಿಸಿದ್ದಾಳೆ.

ಈ ಬಗ್ಗೆ ತನಿಖೆ ನಡೆಸಿದಾಗ ಮೊಮ್ಮಗ ಬೇಕೆಂಬ ಆಸೆಗೆ ಮಹಿಳೆ ತನ್ನ ಸೊಸೆಯೊಂದಿಗೆ ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿ ಮಹಿಳೆ ಪೊಲೀಸರಿಗೆ ಹೇಳಿದ್ದಾಳೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಎಸಿ, ಸಿಟಿ ರಾಕೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಖ್ಯಮಂತ್ರಿಯನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ನಯನತಾರಾ- ಶಿವನ್

ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರ್ ಬ್ಲಾಸ್ಟ್  

ನೋಟಿನ ಮೇಲೆ ಗಾಂಧೀಜಿ ಜೊತೆಗೆ ಟ್ಯಾಗೋರ್ ಮತ್ತು ಅಬ್ದುಲ್ ಕಲಾಂ ಹೆಸರು!

ಅತ್ಯಾಚಾರಕ್ಕೊಳಗಾದ ಬಾಲಕಿಯ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ ಶಾಸಕ!: ಕಾಂಗ್ರೆಸ್ ಕಿಡಿ

ಕೆಟ್ಟುನಿಂತ 12 ಚಕ್ರದ ಲಾರಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ