ನಾನು ತಪ್ಪು ಮಾಡಿಲ್ಲ ಎಂದು ಪದೇ ಪದೇ ಹೇಳುವ ಅಗತ್ಯವಿಲ್ಲ | ನಟಿ ರಾಗಿಣಿ
30/01/2021
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಬಲಿಪಶುವನ್ನಾಗಿ ಮಾಡಲಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. ನಾನು ಕನ್ನಡ ಚಿತ್ರರಂಗಕ್ಕೆ ಬಂದು 12 ವರ್ಷ ಆಗಿದೆ. ಈ ಪ್ರಕರಣದಲ್ಲಿ ನಾನು ಏನಾಗಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಇಂದು ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದ ರಾಗಿಣಿ, ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಪ್ರಕರಣದಿಂದಾಗಿ ನಾನು ಮತ್ತು ನನ್ನ ಕುಟುಂಬ ತುಂಬಾ ನೊಂದಿದೆ. ಬೇರೆಯವರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದು ರಾಗಿಣಿ ಹೇಳಿದ್ದಾರೆ.
ನನಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ನಾನು ತಪ್ಪು ಮಾಡಿಲ್ಲ ಎಂದು ಮತ್ತೆ ಮತ್ತೆ ವಿವರಣೆ ನೀಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಒಂದಿಷ್ಟು ವಿಚಾರಗಳನ್ನು ಹೇಳುತ್ತೇನೆ ಎಂದು ನಟಿ ರಾಗಿಣಿ ಹೇಳಿದ್ದಾರೆ.