ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ: ಇಬ್ಬರು ಸಾವು, ಹಲವರಿಗೆ ಗಂಭೀರ ಗಾಯ
ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.
ಶ್ರೀಧರ್ (20) ಧನುಷ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಣಪತಿ ತರಲು ಟಾಟಾ ಏಸ್ ನಲ್ಲಿ 9 ಜನ ಯುವಕರು ತರೀಕೆರೆಗೆ ಹೋಗುತ್ತಿದ್ದರು. ಈ ವೇಳೆ ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಪಲ್ಟಿಯಾಗಿದೆ.
ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಇವರನ್ನು ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ರವಾನಿಸಲಾಗಿದೆ. ಅಲ್ಲದೇ ಇತರ ಮೂವರು ಯುವಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದ ಊರಿನಲ್ಲಿ ಇದೀಗ ಯುವಕರ ಸಾವು ಸೂತಕದ ವಾತಾವರಣ ಸೃಷ್ಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: