ಟ್ಯಾಕ್ಸಿ ಚಾಲಕರೇ ಎಚ್ಚರಿಕೆಯಿಂದಿರಿ: ಚಾಲಕನ ಮೇಲೆ ದಾಳಿಯ ಬಳಿಕ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ - Mahanayaka
1:19 AM Wednesday 11 - December 2024

ಟ್ಯಾಕ್ಸಿ ಚಾಲಕರೇ ಎಚ್ಚರಿಕೆಯಿಂದಿರಿ: ಚಾಲಕನ ಮೇಲೆ ದಾಳಿಯ ಬಳಿಕ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ

taxi
23/08/2022

ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕೃತ್ಯಗಳು ನಡೆಯುತ್ತಿದೆ. ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್‌ ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ ದಿನೇಶ್ ಕುಂಪಲ ಎಂ. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಆಗಸ್ಟ್  20ರಂದು ಮಂಗಳೂರಿನ ಲೇಡಿಗೋಶನ್ ಬಳಿಯ ಪಾರ್ಕ್‌ನಿಂದ ಅಬ್ದುಲ್ ರಹಿಮಾನ್ ಎಂಬ ಚಾಲಕರ ಬಳಿ ಬಂದ ಮೂರು ಮಂದಿ ಅಪರಿಚಿತರು ಸುಬ್ರಹ್ಮಣ್ಯಕ್ಕೆ ಬಾಡಿಗೆ ಗೊತ್ತುಪಡಿಸಿದ್ದರು. ಬಳಿಕ ಅರ್ಧ ದಾರಿಯಲ್ಲಿ ಮುರ್ಡೇಶ್ವರಕ್ಕೆ ತೆರಳಲು ಸೂಚಿಸಿದ್ದು, ಅಲ್ಲಿಗೆ ತೆರಳಿದ ಬಳಿಕ ಹೊನ್ನಾವರ ಕಡೆಗೆ ಹೋಗುವಂತೆ ಒತ್ತಾಯಿಸಿದ್ದಾರೆ.

ಚಾಲಕನಿಗೆ ಈ ಸಂದರ್ಭ ಅನುಮಾನ ಬಂದು ವಾಹನ ನಿಲ್ಲಿಸಲು ಪ್ರಯತ್ನಿಸುವ ಸಂದರ್ಭದಲ್ಲಿ ಹಠಾತ್ತಾಗಿ ಟ್ಯಾಕ್ಸಿಯಲ್ಲಿದ್ದ ಪ್ರಯಾಣಿಕರು ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಮಂಕಿ ಪೊಲೀಸ್ ಠಾಣೆಯ ಬಳಿ ಗಸ್ತು ನಿರತರಾಗಿದ್ದ ಪೊಲೀಸರು ಬಂದು ಚಾಲಕನನ್ನು ರಕ್ಷಿಸಿದ್ದಾರೆ. ಮಾತ್ರವಲ್ಲದೆ ಟ್ಯಾಕ್ಸಿಯಿಂದ ತಪ್ಪಿಸಿ ಓಡಿಹೋಗಲು ಯತ್ನಿಸಿದ್ದ ಮೂವರು ದುಷ್ಕರ್ಮಿಗಳನ್ನು ಸ್ಥಳೀಯರು ಹಾಗೂ ಪೊಲೀಸರು ಬೆನ್ನಟ್ಟಿ ಹಿಡಿದು ಪ್ರಕರಣ ದಾಖಲಿಸಿದ್ದಾರೆ. ಇಂತಹ ಕೃತ್ಯಗಳು ಸಾಕಷ್ಟು ಈ ಹಿಂದೆಯೂ ನಡೆದಿದ್ದು, ಚಾಲಕರು ಈ ರೀತಿ ಒಂದು ಕಡೆಗೆ ಬಾಡಿಗೆ ಗೊತ್ತುಪಡಿಸಿ ಇನ್ನೊಂದು ಕಡೆಗೆ ತೆರಳಲು ನಿರ್ದೇಶಿಸುವ ಪ್ರಯಾಣಿಕರ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ದಿನೇಶ್ ಕುಂಪಲ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ