ಮನೆಯಲ್ಲಿ ಸಾಕು, ಕಚೇರಿಗೆ ಬಂದು ಕೆಲಸ ಮಾಡಿ ಅಂದಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ರಾಜೀನಾಮೆ ಪತ್ರ..! - Mahanayaka

ಮನೆಯಲ್ಲಿ ಸಾಕು, ಕಚೇರಿಗೆ ಬಂದು ಕೆಲಸ ಮಾಡಿ ಅಂದಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ರಾಜೀನಾಮೆ ಪತ್ರ..!

13/06/2023

ದೇಶದಲ್ಲಿ ಕೊರೊನಾ ಬಂದಾಗ ದೇಶಾದ್ಯಂತ ವರ್ಕ್ ಫ್ರಂ ಹೋಮ್ ನಿಯಮವನ್ನು ಜಾರಿಗೆ ತರಲಾಗಿತ್ತು. ಕೊರೊನಾ ಬಂದು ಹೋಗಿ ಆಗಿದೆ. ಇದೀಗ ಇಲ್ಲೊಂದು ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು. ನೀವೆಲ್ಲಾ ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯಲ್ಲಿ (ಟಿಸಿಎಸ್) 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಇವರಿಗೆ ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ.

ಕಳೆದ ಮೂರು ವರ್ಷಗಳಿಂದ ಮನೆಯಿಂದ ಕೆಲಸ ಮಾಡುತ್ತಿದ್ದೀರಿ. ಇನ್ಮೇಲೆ ಕಡ್ಡಾಯವಾಗಿ ಆಫೀಸಿಗೆ ಬಂದು ಕೆಲಸ ಮಾಡುವಂತೆ ಕಂಪನಿ ಹೇಳಿದೆ. ಈ ಸೂಚನೆ ಹೊರ ಬೀಳುತ್ತಿದ್ದಂತೆಯೇ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ.

ಈ ಕುರಿತು ಮಾತನಾಡಿದ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್, ನಾವು ಸೂಚನೆ ನೀಡಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು. ಅದರಲ್ಲಿ ಹೆಚ್ಚಿನದ್ದು ಮಹಿಳೆಯರ ರಾಜೀನಾಮೆ ಪತ್ರಗಳೇ ಆಗಿವೆ ಎಂದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ