ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಾಲೆತ್ತೂರು ಎಂಬಲ್ಲಿ ನಡೆದಿದೆ.
ಸಾಲೆತ್ತೂರು ಭಾಗದಲ್ಲಿ 6 ಯುವತಿಯರ ಸಹಿತ 11 ಮಂದಿಯ ತಂಡವೊಂದು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿತ್ತು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಅವರನ್ನು ವಿಚಾರಿಸಿದ್ದು, ಆಗ ಅವರು, ನಾವು ಧ್ರುವ ಕಂಪೆನಿ ವತಿಯಿಂದ ಬಂದಿದ್ದು, ಮತದಾನ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಆ ಬಳಿಕ ಸ್ಥಳೀಯರು ಅವರನ್ನು ವಿಟ್ಲ ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿಕೊಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw