ತೆಲಂಗಾಣದಲ್ಲಿ ‘ಕೈ’ ಆಪರೇಷನ್: ಆಡಳಿತಾರೂಢ ಬಿಆರ್ ಎಸ್ ಗೆ ತಲೆನೋವು..!
ಅತ್ತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಇತ್ತ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ನ ಭಿನ್ನಮತೀಯ ನಾಯಕರನ್ನು ಸೆಳೆಯುವ ಮೂಲಕ ತೆಲಂಗಾಣದಲ್ಲಿ ತನ್ನ ನೆಲೆಯನ್ನು ಬಲಪಡಿಸುವ ಪ್ರಯತ್ನಗಳನ್ನು ತೀವ್ರಗೊಳಿಸಿದೆ.
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ 5-6 ತಿಂಗಳುಗಳು ಬಾಕಿ ಇರುವಾಗ ಕಾಂಗ್ರೆಸ್ ಪಕ್ಷವು ಆಪರೇಷನ್ ಶುರು ಮಾಡಿದೆ.
ಬಿಆರ್ ಎಸ್ ಮತ್ತು ಇತರ ಪಕ್ಷಗಳ ನಾಯಕರು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಳ್ಳುವುದರೊಂದಿಗೆ ಬಿಆರ್ ಎಸ್ ಗೆ ತಲೆನೋವಾಗಿದೆ. ಇದು ಎರಡು ಅವಧಿಯ ಅಧಿಕಾರದ ನಂತರ ಬಿಆರ್ ಎಸ್ ಆಡಳಿತ ವಿರೋಧಿ ಅಲೆಯನ್ನು ಎದುರಿಸುವ ಸಾಧ್ಯತೆ ಇದೆ ಎಂದು ರಾಜಕೀಯ ವೀಕ್ಷಕರು ಹೇಳುತ್ತಾರೆ.
ಕಳೆದ ಕೆಲವು ದಿನಗಳಲ್ಲಿ, ಈ ಹಿಂದೆ ಬಿಜೆಪಿಗೆ ಆದ್ಯತೆ ನೀಡುತ್ತಿದ್ದ ಬಂಡಾಯ ಬಿಆರ್ ಎಸ್ ನಾಯಕರನ್ನು ಸಹ ಆಕರ್ಷಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಕರ್ನಾಟಕ ಫಲಿತಾಂಶದ ನಂತರ ಅನೇಕ ನಾಯಕರು ಕಾಂಗ್ರೆಸ್ ಸೇರಲು ಮನಸ್ಸು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೇಂದ್ರ ಮತ್ತು ರಾಜ್ಯ ನಾಯಕರು ನಿರಂತರ ಮಾತುಕತೆಗಳ ಮೂಲಕ ಪ್ರಯತ್ನಗಳನ್ನು ಮಾಡಿದೆ. ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ತನ್ನ ಪಾಳಯಕ್ಕೆ ಹೆಚ್ಚಿನ ನಾಯಕರನ್ನು ಆಕರ್ಷಿಸುವ ಸಾಧ್ಯತೆ ಇದೆ.
‘ಬಿಆರ್ ಎಸ್ ಮತ್ತು ಬಿಜೆಪಿಯ ಅನೇಕ ಭಿನ್ನಮತೀಯ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಕೆಲವು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದವರು ಸಹ ಹಿಂತಿರುಗಬಹುದು’ ಎಂದು ವಿಶ್ಲೇಷಕ ಪಾಲ್ವಾಯಿ ರಾಘವೇಂದ್ರ ರೆಡ್ಡಿ ಹೇಳಿದ್ದಾರೆ.
2014 ಮತ್ತು 2018 ರ ಚುನಾವಣೆಗಳಲ್ಲಿನ ಸೋಲು, ಪಕ್ಷಾಂತರ, ಉಪಚುನಾವಣೆಗಳಲ್ಲಿ ಕಳಪೆ ಪ್ರದರ್ಶನ ಮತ್ತು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಮತ್ತು ಒಳಜಗಳಗಳಗಳ ಹೊರತಾಗಿಯೂ ಕಾಂಗ್ರೆಸ್ ರಾಜ್ಯದಲ್ಲಿ ಬಲವಾದ ಶಕ್ತಿಯಾಗಿ ಉಳಿದಿದೆ ಎಂದು ಹೇಳಲಾಗಿದೆ.
ಕೆಲವು ಜಿಲ್ಲೆಗಳಿಗೆ ಸೀಮಿತವಾಗಿರುವ ಬಿಜೆಪಿ ಪಕ್ಷಕ್ಕಿಂತ ಭಿನ್ನವಾಗಿ ಕಾಂಗ್ರೆಸ್ ಪಕ್ಷ ಇನ್ನೂ ರಾಜ್ಯಾದ್ಯಂತ ಬಲವಾದ ಅಸ್ತಿತ್ವವನ್ನು ಹೊಂದಿದೆ ಎನ್ನಲಾಗಿದೆ. ಕೆಲವು ನಾಯಕರು ತೊರೆದಿದ್ರೂ ಪಕ್ಷದ ಕಾರ್ಯಕರ್ತರು ಇನ್ನೂ ತಳಮಟ್ಟದಲ್ಲಿ ಸಕ್ರಿಯರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ಮೊಹಮ್ಮದ್ ಅಲಿ ಶಬ್ಬೀರ್ ಹೇಳಿದ್ದಾರೆ. ಮಾಜಿ ಖಮ್ಮಂ ಸಂಸದ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಮತ್ತು ಮಾಜಿ ಸಚಿವ ಜುಪಲ್ಲಿ ಕೃಷ್ಣ ರಾವ್ ಅವರು ಕಾಂಗ್ರೆಸ್ ಸೇರಲು ಮನಸ್ಸು ಮಾಡಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw