ಮಕ್ಕಳಿಗೆ ಕೊಡುಗೆ: ತೆಲಂಗಾಣದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ನಿತ್ಯವೂ ಆಹಾರ; ಏನಿದು ಹೊಸ ಯೋಜನೆ ಗೊತ್ತಾ..? - Mahanayaka
7:28 PM Wednesday 5 - February 2025

ಮಕ್ಕಳಿಗೆ ಕೊಡುಗೆ: ತೆಲಂಗಾಣದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ನಿತ್ಯವೂ ಆಹಾರ; ಏನಿದು ಹೊಸ ಯೋಜನೆ ಗೊತ್ತಾ..?

06/10/2023

ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಬೆಳಗ್ಗಿನ ತಿಂಡಿ ನೀಡುವ ‘ಮುಖ್ಯಮಂತ್ರಿ ಉಪಹಾರ ಯೋಜನೆ’ಗೆ ತೆಲಂಗಾಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 23 ಲಕ್ಷ ಮಕ್ಕಳಿಗೆ ನಿತ್ಯವೂ ಆಹಾರ ಒದಗಿಸುವ ಗುರಿ ಈ ಯೋಜನೆಯದ್ದು. ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಖಾತೆ ಸಚಿವ ಕೆ.ಟಿ.ರಾಮ ರಾವ್‌ ಅವರು ರಾಜ್ಯದ ವಿವಿಧ ಸ್ಥಳಗಳಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿರುವ ಅವರು, ರಾಜ್ಯಾದ್ಯಂತ ಇರುವ 27,147 ಶಾಲೆಗಳಲ್ಲಿಯೂ ದಸರಾ ರಜೆಯ ನಂತರ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಇದನ್ನು ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿಸ್ತರಿಸಲಾಗುವುದು ಎಂದಿದ್ದಾರೆ.

ಎಷ್ಟು ಮಂದಿಗೆ ಪ್ರಯೋಜನ..?
20 ಲಕ್ಷ ಮಂದಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. 1 ರಿಂದ 10 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಉಪಹಾರ ನೀಡುವ ಏಕೈಕ ರಾಜ್ಯ ತೆಲಂಗಾಣವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದತ್ತ ಗಮನ ಹರಿಸುವುದರಿಂದ ಶಾಲಾ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಉದ್ದೇಶ ಈ ಯೋಜನೆಯದ್ದು.
ಸರ್ಕಾರಿ ಶಾಲೆಗಳಿಗೆ ದಾಖಲಾದ ಹೆಚ್ಚಿನ ಮಕ್ಕಳು ಕಡಿಮೆ ಆದಾಯವಿರುವ ಕುಟುಂಬದಿಂದ ಬಂದವರಾಗಿರುತ್ತಾರೆ.

ಪೋಷಕರು ತಮ್ಮ ಆಹಾರದ ಬಗ್ಗೆ ಚಿಂತಿಸದೆ ಸಮಯಕ್ಕೆ ಸರಿಯಾಗಿ ಶಾಲೆಗೆ ಕಳುಹಿಸಲು ಸಹಾಯ ಮಾಡುತ್ತದೆ.
ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಪ್ರತಿದಿನ ಪೌಷ್ಟಿಕ ಆಹಾರ ಸಿಗುತ್ತದೆ. ಇದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸುತ್ತದೆ. ಪ್ರತಿ 10 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಉಪಾಹಾರ ಸೇವಿಸಿದರೆ ಉಳಿದವರು ಖಾಲಿ ಹೊಟ್ಟೆಯಲ್ಲಿ ಶಾಲೆಗಳಿಗೆ ಬರುತ್ತಾರೆ ಎಂಬುದು ಈ ಯೋಜನೆಯ ಹಿಂದಿನ ಉದ್ದೇಶ.

ಇತ್ತೀಚಿನ ಸುದ್ದಿ