ಅಟ್ಯಾಕ್: ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ದಾಳಿ
ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೈದರಾಬಾದ್ ನಿವಾಸದ ಮೇಲೆ ಗುಂಪೊಂದು ಹೂವಿನ ಕುಂಡಗಳು ಮತ್ತು ಇತರ ವಸ್ತುಗಳನ್ನು ಎಸೆದು ಧ್ವಂಸಗೊಳಿಸಿದೆ. ಈ ಗುಂಪು ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಎಂದು ಹೇಳಿಕೊಂಡಿದೆ.
‘ಪುಷ್ಪ-2’ ಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹೈದರಾಬಾದ್‌ನ ಚಿತ್ರಮಂದಿರದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಗೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ (ಒಯು-ಜೆಎಸಿ) ಆರು ಸದಸ್ಯರು ನಟ ಅಲ್ಲು ಅರ್ಜುನ್ ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದರು. ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು ಎಂದು ಜುಬಿಲಿ ಹಿಲ್ಸ್ ಪೊಲೀಸರು ತಿಳಿಸಿದ್ದಾರೆ. ಆದರೆ, ಅಲ್ಲು ಅರ್ಜುನ್ ಕುಟುಂಬದಿಂದ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj