ಸೂಚನೆ :ವಾಹನ ಸಂಚಾರ ತಾತ್ಕಾಲಿಕ ನಿಷೇಧ!
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷಮರ್ಧಿನಿ ದೇವಸ್ಥಾನ ರಸ್ತೆಯನ್ನು ಅಗಲೀಕರಣಗೊಳಿಸಿ, ರಸ್ತೆ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಹಾಗೂ ಪಿ.ಡ್ಲ್ಯೂಡಿ ಇಲಾಖೆ ವತಿಯಿಂದ ನಿರ್ವಹಿಸುತ್ತಿದ್ದು, ಸದ್ರಿ ರಸ್ತೆಯಲ್ಲಿ ಆಗಸ್ಟ್ 6 ರಿಂದ ಸೆಪ್ಟಂಬರ್ 5 ರ ವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ.
ಬದಲಿ ಮಾರ್ಗವಾಗಿ ಕಿನ್ನಿಮೂಲ್ಕಿ ಗೋಪುರದಿಂದ ಬಲೈಪಾದೆ ಜಂಕ್ಷನ್‌ನಿಂದ ಮುಂದೆ ಎಡಕ್ಕೆ ಹಾಗೂ ಚಿಟ್ಪಾಡಿ ಹನುಮಾನ್ ಗ್ಯಾರೇಜ್ ರಸ್ತೆಯಿಂದ ವಾಹನಗಳು ಸಂಚರಿಸಬಹುದಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA