ಪಿಕಪ್ –ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಬೆಳ್ತಂಗಡಿ: ಹಳೇಕೋಟೆ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಸಹಸವಾರ ಗಂಭೀರ ಗಾಯಗೊಂಡಿದ್ದಾರೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ. ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಫೀಕ್ (17) ಗಂಭೀರ ಗಾಯಗೊಂಡಿದ್ದಾರೆ.
ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಪುರುಷೋತ್ತಮ ಮೃತಪಟ್ಟಿದ್ದು, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth