ಲಾರಿ—ಟಾಟಾ ಏಸ್ ನಡುವೆ ಭೀಕರ ಅಪಘಾತ: ನಾಲ್ವರ ದಾರುಣ ಸಾವು - Mahanayaka
9:11 AM Thursday 6 - February 2025

ಲಾರಿ—ಟಾಟಾ ಏಸ್ ನಡುವೆ ಭೀಕರ ಅಪಘಾತ: ನಾಲ್ವರ ದಾರುಣ ಸಾವು

rayachoor
07/12/2023

ರಾಯಚೂರು: ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಸಿಂಧನೂರು ತಾಲೂಕಿನ ಪಡಗದಿನ್ನಿ ಕ್ಯಾಂಪ್ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಇಸ್ಮಾಯಿಲ್, ಮೈಬೂಬ್, ಚನ್ನಬಸವ, ಅಂಬರೀಶ್, ರವಿ ಬೊಕ್ಕನಟ್ಟಿ ಎಂದು ಗುರುತಿಸಲಾಗಿದೆ. ಮೃತಪಟ್ಟವರು ಟಾಟಾ ಏಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಾಗಿದ್ದಾರೆ.

ಮಸ್ಕಿ ಕಡೆಯಿಂದ ಸಿಂಧನೂರು ಕಡೆಗೆ ಬರುತ್ತಿದ್ದ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ. ಮೃತರು ಮದುವೆ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ