ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ: ಬಸವರಾಜ ಬೊಮ್ಮಾಯಿ
ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಾನಿಗೊಳಗಾದ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಇಂದು ಉಡುಪಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಹಾನಿಯಾಗಿರುವ ರಸ್ತೆಗಳ ದುರಸ್ತಿ, ಸಣ್ಣ ಸೇತುವೆಗಳ ನಿರ್ಮಾಣ ಸರ್ಕಾರದ ಆದ್ಯತೆಯ ಕೆಲಸಗಳಾಗಿವೆ. ರಾಜ್ಯದಲ್ಲಿ ರಸ್ತೆಗಳ ನಿರ್ಮಾಣ, ಸಣ್ಣ ಸೇತುವೆಗಳು, ವಿದ್ಯುತ್ ಕಂಬಗಳ ಮರುಸ್ಥಾಪನೆಗಳನ್ನು ಆದ್ಯತೆಯ ಕೆಲಸವಾಗಿ ಸರ್ಕಾರ ತೆಗೆದುಕೊಳ್ಳಲಿದ್ದು ಈ ಮೂಲಸೌಕರ್ಯಗಳಿಗೆ 500 ಕೋಟಿ ರೂಪಾಯಿ ಹಣವನ್ನು ಬಳಸಿಕೊಳ್ಳಲಾಗುವುದು, ಅಗತ್ಯಬಿದ್ದರೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
ಜಿಲ್ಲಾ ಮಟ್ಟದಿಂದ ಮಳೆ ಸಂಬಂಧಿ ಅನಾಹುತಗಳ ಅಂಕಿಅಂಶಗಳನ್ನು ಸಂಗ್ರಹಿಸಿದ ನಂತರ ಅಗತ್ಯಬಿದ್ದರೆ ಕೇಂದ್ರ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯಿಂದ ಹೆಚ್ಚುವರಿ ಹಣವನ್ನು ಕೇಳಲಾಗುವುದು ಎಂದರು.
ಮಳೆ ಅಧಿಕವಾಗಿರುವಾಗ ಕರಾವಳಿ ಭಾಗದಲ್ಲಿ ಕಡಲೊರೆತ ಸಮಸ್ಯೆಗೆ ಸಮುದ್ರ ಅಲೆ ತಡೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಪ್ರಾಯೋಗಿಕ ಮಾದರಿಯಲ್ಲಿ ನಿರ್ಮಿಸಲಾಗುವುದು. ಈ ಮಾದರಿ ಸಮುದ್ರ ಕೊರೆತ ತಡೆಯುವಲ್ಲಿ ಯಶಸ್ವಿಯಾದರೆ ಎಲ್ಲೆಲ್ಲಿ ಸಮುದ್ರ ಕೊರೆತ ಸಮಸ್ಯೆಯಿದೆಯೋ ಅಲ್ಲಿಗೆ ವಿಸ್ತರಿಸಲಾಗುವುದು ಎಂದು ಕೂಡ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka