ನಟ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು?: ಸುದ್ದಿಯ ಅಸಲಿಯತ್ತೇನು?
ತಮಿಳು ಖ್ಯಾತ ನಟ ವಿಜಯ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಸೃಷ್ಟಿಯಾಗಿದ್ದು, ವಿಜಯ್ ಅವರ ವಾರಿಸು ಚಿತ್ರ ಬಿಡುಗಡೆಯ ಸಂದರ್ಭದಲ್ಲೇ ಇಂತಹದ್ದೊಂದು ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೀಡಾಗಿದೆ.
ವಿಜಯ್ ಹಾಗೂ ಸಂಗೀತಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಅವರು ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಸುದ್ದಿಗಳು ವ್ಯಾಪಕವಾಗಿ ಹಬ್ಬಿದೆ. ಆದರೆ, ಇದೊಂದು ಸುಳ್ಳು ಸುದ್ದಿ ಅನ್ನೋ ವಿಚಾರ ಇದೀಗ ಬೆಳಕಿಗೆ ಬಂದಿದೆ.
ವಿಕಿಪೀಡಿಯಾದಲ್ಲಿ ವಿಜಯ್ ಹಾಗೂ ಸಂಗೀತ ವಿಚ್ಛೇದನ ಪಡೆದುಕೊಂಡಿದ್ದಾರೆ ಎಂದು ಬದಲಾವಣೆ ಮಾಡಿದ್ದು, ಇದರಿಂದಾಗಿ ಈ ವಿವಾದ ಹುಟ್ಟಿಕೊಂಡಿದೆ ಎಂದು ಹೇಳಲಾಗಿದೆ. ಈ ಸುದ್ದಿ ಸುಳ್ಳು ಮತ್ತು ಆಧಾರ ರಹಿತವಾಗಿದೆ ಎಂದು ವಿಜಯ್ ಕುಟುಂಬಸ್ಥರು ತಿಳಿಸಿದ್ದಾರೆ.
ವಾರಿಸು ಚಿತ್ರದಲ್ಲಿ ಸಂಭ್ರಮಿಸುವ ನಿರೀಕ್ಷೆಯಲ್ಲಿದ್ದ ಇಳೆಯ ದಳಪತಿ ವಿಜಯ್ ಅವರ ಬಗ್ಗೆ ಹೀಗೊಂದು ಸುಳ್ಳು ಸುದ್ದಿ ಸೃಷ್ಟಿಯಾಗಿರುವುದು ಬೇಸರವನ್ನುಂಟು ಮಾಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw