ತಲವಾರಿನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಮೂವರು ಅರೆಸ್ಟ್
ಉಡುಪಿ :ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ಶೆಟ್ಟಿ ಎಂಬರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದಂತೆ ತಲೆ ಮರೆಸಿಕೊಂಡಿರುವ ಬರ್ತ್ ಡೇ ಯುವಕ ನಿರಂಜನ್ ಶೆಟ್ಟಿಗಾರ್, ತನುಜ್, ಸೂರಜ್ ಹಾಗೂ ಅನಿಶ್ ಇವರ ಬಂಧನಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಪಡುಬಿದ್ರಿ ಎಲ್ಫ್ ಪುರುಷೋತ್ತಮ್ ತಂಡ ಬಲೆ ಬೀಸಿದೆ.
ಮೇ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಈ ಏಳು ಮಂದಿ ಸ್ನೇಹಿತರು ತಲವಾರ್ ನ್ನು ಬಳಸಿ ನಿರಂಜನ್ ಶೆಟ್ಟಿಗಾರ್ ಎಂಬಾತನ ಹುಟ್ಟು ಹಬ್ಬ ಆಚರಿಸಿದ್ದು, ಈ ವಿಡಿಯೋ ತುಣುಕನ್ನು ಅವರೇ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಇದು ಪೊಲೀಸ್ ಇಲಾಖೆಗೆ ತಿಳಿದು ಇದೀಗ 7 ಮಂದಿಗೆ ಸಂಕಷ್ಟ ತಂದೊಡ್ಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸೌತಡ್ಕ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ!
ರೈತ ಮುಷ್ಕರದ ಪ್ರಭಾವವೂ ಆಳುವವರ ಕುತಂತ್ರಗಳೂ
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿಸರ್ಜನೆ
ಆಂಧ್ರಪ್ರದೇಶದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ, ನಿರ್ವಾಹಕನಿಗೆ ಮಾರಣಾಂತಿಕ ಹಲ್ಲೆ!
ಮಕ್ಕಳು ಅಳುತ್ತಾರೆ ಎಂದು ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಾಯಿ!: ಬೆಚ್ಚಿ ಬೀಳಿಸುವಂತಿದೆ ಈ ಘಟನೆ