ಗುಡ್ಡದಲ್ಲಿ ಪತ್ತೆಯಾದ ತಲೆ ಬುರುಡೆಯ ರಹಸ್ಯ ಬಯಲು! - Mahanayaka

ಗುಡ್ಡದಲ್ಲಿ ಪತ್ತೆಯಾದ ತಲೆ ಬುರುಡೆಯ ರಹಸ್ಯ ಬಯಲು!

nagesh gowda
09/08/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಕ್ಕರೆಕಾಡು ಎಂಬಲ್ಲಿನ ಗುಡ್ಡವೊಂದರಲ್ಲಿ ಪತ್ತೆಯಾದ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಯಾರದೆಂಬುದು ಗೊತ್ತಾಗಿದೆ.

ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ ನಿವಾಸಿ ನಾಗೇಶ್ ಗೌಡ (65) ಎಂದು ಗುರುತಿಸಲಾಗಿದೆ.  ನಾಗೇಶ್ ಗೌಡ ಅವರು 6 ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಸಂಜೆ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ ಮಂದಿಗೆ ತಲೆಬುರುಡೆ, ಎಲುಬು ಹಾಗೂ ಆ ವ್ಯಕ್ತಿ‌ ಧರಿಸಿರುವುದಾಗಿ ಸಂಶಯಿಸಲ್ಪಟ್ಟ ಬಟ್ಟೆ ಕಾಣಸಿಕ್ಕಿದೆ. ಬಳಿಕ ಅವರು ಮರಳಿಬಂದು ಮನೆಮಂದಿಗೆ ವಿಚಾರ ತಿಳಿಸಿದ್ದಾರೆ. ರಾತ್ರಿ‌ ವೇಳೆ ಅವರು ಈ ವಿಚಾರವನ್ನು ವಿಟ್ಲ ಠಾಣಾ ಪೊಲೀಸರಿಗೆ ತಿಳಿಸಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿ ನಾಪತ್ತೆ ಪ್ರಕರಣಗಳ ಜಾಡು ಹಿಡಿದು ತನಿಖೆ ನಡೆಸಿದ್ದು ಈ ವೇಳೆ ನಾಪತ್ತೆಯಾದ ನಾಗೇಶ್ ರವರ ಮಗನನ್ನು ಸ್ಥಳಕ್ಕೆ ಕರೆಸಿದ್ದರು. ಈ ವೇಳೆ ಅವರು ನಾಪತ್ತೆಯಾಗುವ ದಿನ ಅವರು ಧರಿಸಿದ್ದ ಬಟ್ಟೆ ಹಾಗೂ ತಲೆಬುರುಡೆ ಸಮೀಪ ಪತ್ತೆಯಾಗಿದ್ದ ಬಟ್ಟೆಯ ಆಧಾರದಲ್ಲಿ ಅದು ನಾಗೇಶ್ ಗೌಡರದ್ದೆ ಎಂದು ಅವರ ಮಗ ಗುರುತು ಪತ್ತೆ ಮಾಡಿದ್ದಾರೆ.

ನಾಗೇಶ್ ಗೌಡ ರವರು ನೆಕ್ಕರೆ ಕಾಡು ರಸ್ತೆಯಾಗಿ ಮನೆಯೊಂದಕ್ಕೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ