ತಲೆಗೆ ಗುಂಡು ಹಾರಿಸಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ: ಆತ್ಮಹತ್ಯೆಯೋ?, ಕೊಲೆಯೋ? ಎಂಬ ಶಂಕೆ!
ಬೆಂಗಳೂರು: ವಿದ್ಯಾರ್ಥಿಯೊಬ್ಬನ ಮೃತದೇಹ ಬೆಂಗಳೂರಿನ ಸಂಜಯನಗರ ಬಸ್ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಇದು ಕೊಲೆಯೋ ಆತ್ಮಹತ್ಯೆಯೋ ಎನ್ನುವ ಶಂಕೆ ಮೂಡಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಲಾಗಿದೆ.
ಮೃತ ವಿದ್ಯಾರ್ಥಿ ಜೇಬಿನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ವಿದ್ಯಾರ್ಥಿ ಉತ್ತರಾಖಂಡ್ ಮೂಲದವನಾಗಿದ್ದಾನೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಯನ್ನು ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ.
ರಾಹುಲ್ ಭಂಡಾರಿ ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ. ತಂದೆ ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ರಾಹುಲ್ ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ತಿದ್ದ. ಮಾನಸಿಕ ಒತ್ತಡ ಹೆಚ್ಚಾದಾಗ ಎದ್ದು ವಾಕ್ ಮಾಡ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ. ನಾಲ್ಕು ಗಂಟೆಗೆ ಮನೆಯಿಂದ ತೆರಳಿದ್ದಾನೆ. ಬಳಿಕ ಬೆಳಗ್ಗೆ ನಿದ್ದೆಯಿಂದ ಎದ್ದ ಪೋಷಕರು ಮಗ ರೂಮ್ನಲ್ಲಿ ಕಾಣಿಸದ ಹಿನ್ನೆಲೆ ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ ರಾಹುಲ್ ಕರೆ ಸ್ವೀಕರಿಸಿಲ್ಲ.
ರಾಹುಲ್ ಮುಂಜಾನೆ ಐದು ಗಂಟೆ ಸುಮಾರಿಗೆ ಶೂಟ್ ಮಾಡಿಕೊಂಡು ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಲೆಯ ಎಡಭಾಗದಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಮೃತ ಪಟ್ಟ ಬಳಿಕವೂ ಪೋಷಕರಿಂದ ನಿರಂತರವಾಗಿ ಕರೆ ಬರ್ತಾನೆ ಇತ್ತು. ಬಳಿಕ ಸ್ಥಳದಲ್ಲಿದ್ದ ಪೊಲೀಸರು ಫೋನ್ ತೆಗೆದು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಕ್ಲಬ್ ಹೌಸ್ ಹೌಸ್ ನಲ್ಲಿ ಇಂದು ಪ್ರಧಾನಿ ಮೋದಿ ಜನ್ಮ ದಿನಾಚರಣೆ: ಸಂಸದ ಪ್ರತಾಪ್ ಸಿಂಹ ಭಾಷಣ
ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಕಂದಕಕ್ಕೆ ಉರುಳಿದ ಕಾರು!
ಸಿನಿಮಾ, ನಾಟಕ ಪ್ರದರ್ಶನಗಳಿಗೆ ಪೂರ್ಣ ಪ್ರಮಾಣದ ಅವಕಾಶ ನೀಡಿ | ದೇವದಾಸ್ ಕಾಪಿಕಾಡ್ ಒತ್ತಾಯ
ದೇವಾಲಯ ತೆರವು: ಸಂಸದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹಗೆ ಹಿಂದೂ ಕಾರ್ಯಕರ್ತರ ಮುತ್ತಿಗೆ
ಭೀಕರ ಅಪಘಾತ: ಬಸ್, ಟಾಟಾ ಏಸ್ ವಾಹನದ ನಡುವೆ ಸಿಲುಕಿದ ತಂದೆ, ಮಗಳು ಸಾವು
ಮದುವೆಯಾಗುವುದಿಲ್ಲ ಎಂದ ಯುವತಿ! | ಗ್ರಾಮಕ್ಕೆ ಓಡಿ ಬಂದ ಅಧಿಕಾರಿಗಳ ದಂಡು
ರಾಷ್ಟ್ರಧ್ವಜಕ್ಕೆ ಅಗೌರವ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು
ಅವಸರದಿಂದ ದೇವಸ್ಥಾನಗಳನ್ನು ಒಡೆಯಬೇಡಿ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ