ತಂದೆ ಬಿಜೆಪಿ, ಮಗ ಕಾಂಗ್ರೆಸ್ ಗೆ!?: ಹೆಚ್.ವಿಶ್ವನಾಥ್ ಪುತ್ರ ಪೂರ್ವಜ್ ಕಾಂಗ್ರೆಸ್ ನತ್ತ! - Mahanayaka
8:30 PM Wednesday 5 - February 2025

ತಂದೆ ಬಿಜೆಪಿ, ಮಗ ಕಾಂಗ್ರೆಸ್ ಗೆ!?: ಹೆಚ್.ವಿಶ್ವನಾಥ್ ಪುತ್ರ ಪೂರ್ವಜ್ ಕಾಂಗ್ರೆಸ್ ನತ್ತ!

h vishwanath
09/08/2022

ಮೈಸೂರು: ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಶೀಘ್ರದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದು, ತಂದೆ ಬಿಜೆಪಿಯಲ್ಲಿದ್ದರೆ, ಮಗ ಕಾಂಗ್ರೆಸ್ ಗೆ ಧುಮುಕಲಿದ್ದಾರೆ.

ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ ಎಂದು ಪೂರ್ವಜ್ ವಿಶ್ವನಾಥ್ ಹೇಳಿದ್ದು, ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ಪಕ್ಷ ಸೇರುವ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ತಂದೆ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ಅವರು ನಿನ್ನಿಷ್ಟ ಎಂದು ಹೇಳಿದ್ದಾರೆ ಎಂದರು.

ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿರುವೆ. ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ವಿಶ್ವಾಸವಿದೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ