ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ - Mahanayaka
6:30 PM Wednesday 5 - February 2025

ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

uttar pradesh police
09/10/2021

ಲಕ್ನೋ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬರು ಪೊಲೀಸರ ನಿರ್ಲಕ್ಷ್ಯದಿಂದ ನೊಂದು ಪೊಲೀಸ್ ಠಾಣೆ ಎದುರಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಅಜಮ್‌ ಗಢದಲ್ಲಿ ನಡೆದಿದೆ.

54 ವರ್ಷದ ಮಹಿಳೆ, ಮೆಹನಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿಯಾಗಿದ್ದು,  ಅಕ್ಟೋಬರ್ 5 ರಂದು ಪೊಲೀಸ್ ತುರ್ತು ಸಂಖ್ಯೆಗೆ ಕರೆ ಮಾಡಿ ಅನಿಲ್ ಸಿಂಗ್ ಮತ್ತು ಇನ್ನೊಬ್ಬ ವ್ಯಕ್ತಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ಆ ಬಳಿಕ ಪತಿಯ ಜೊತೆಗೆ ಸಂತ್ರಸ್ತೆ ಔಪಚಾರಿಕ ದೂರು ನೀಡಲು ಪೊಲೀಸ್ ಠಾಣೆಗೆ ಆಗಮಿಸಿ ಲಿಖಿತ ದೂರನ್ನು ಸಹ ನೀಡಿದ್ದಾರೆ. ಆದರೆ, ಇನ್ಸ್‌ ಪೆಕ್ಟರ್ ಚುನ್ನಾ ಎಸ್ ಮತ್ತು ಇನ್ಸ್‌ ಪೆಕ್ಟರ್ ವಿನೋದ್ ಕುಮಾರ್ ಸಂತ್ರಸ್ತೆಯನ್ನು ನಾಲ್ಕು ಗಂಟೆಗಳ ಕಾಲ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಸಂಧಾನಕ್ಕಾಗಿ ಸಂತ್ರಸ್ತೆಗೆ ಒತ್ತಡ ಹೇರಿದ್ದಾರೆ. ಜೊತೆಗೆ ಆರೋಪಿಗಳ ತಪ್ಪನ್ನು ಮುಚ್ಚಿ ಹಾಕಲು ಮುಂದಾಗಿದ್ದಾರೆ.

ಘಟನೆ ನಡೆದು ನಾಲ್ಕು ದಿನಗಳು ಕಳೆದರೂ ಆರೋಪಿಗಳ ವಿರುದ್ಧ ಪೊಲೀಸರು ಕೇಸ್ ಕೂಡ ದಾಖಲಿಸಿಕೊಂಡಿಲ್ಲ. ಯಾವುದೇ ಕ್ರಮವಹಿಸದೇ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಇದರಿಂದ ತೀವ್ರವಾಗಿ ನೊಂದ ಮಹಿಳೆ ಠಾಣೆಯ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಯ ಬಳಿಕ  ಪ್ರಕರಣ ಇನ್ಸ್‌ ಪೆಕ್ಟರ್ ಚುನ್ನಾ ಎಸ್ ಮತ್ತು ಇನ್ಸ್‌ ಪೆಕ್ಟರ್ ವಿನೋದ್ ಕುಮಾರ್ ನನ್ನು ಅಮಾನತ್ತು ಮಾಡಿ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಮಾತ್ರವಲ್ಲದೇ ಅತ್ಯಾಚಾರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ಮತ್ತು 306(ಆತ್ಮಹತ್ಯೆಗೆ ಕುಮ್ಮಕ್ಕು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯನ್ನು ವಿರೋಧಿಸಿ ಟ್ವೀಟ್ ಮಾಡಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಸರ್ಕಾರವು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.   ಅಜಂಗಢದಲ್ಲಿ ಅತ್ಯಾಚಾರದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಠಾಣೆ ಎದುರು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ತುಂಬಾ ದುಃಖಕರ. ರಾಜ್ಯ ಸರ್ಕಾರ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಮಗನ ಅಂತ್ಯಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವು!

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಗಂಗೊಳ್ಳಿ: ಹಿಂದೂಗಳ ಮೀನುಮಾರುಕಟ್ಟೆಯನ್ನು ಮುಸ್ಲಿಮರು ಬಹಿಷ್ಕರಿಸಿದ್ದು ಯಾಕೆ? | ಒಂದೇ ತಾಯಿ ಮಕ್ಕಳಂತಿದ್ದವರ ನಡುವೆ ಏನಿದು ಗಲಾಟೆ?

ಮಂಗಳೂರು: ಬಾಲಕಿಯನ್ನು ಅಪಹರಿಸಿ ನಿಗೂಢ ಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರ!

ರೈತರ ಮಾರಣಹೋಮ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರ ಪುತ್ರ ಪೊಲೀಸರ ಮುಂದೆ ಹಾಜರು

26 ಬ್ರಾಹ್ಮಣೇತರ ಅರ್ಚಕರ ನೇಮಕ: ತಮಿಳುನಾಡು ಸರ್ಕಾರದ ಐತಿಹಾಸಿಕ ಹೆಜ್ಜೆ

ಇತ್ತೀಚಿನ ಸುದ್ದಿ