ಕುಡಿಯಲು ಹಣ ನೀಡಲಿಲ್ಲ ಎಂದು ತಂಗಿಯ ಮಗುವನ್ನು ಗೋಡೆಗೆ ಬಡಿದ ಪಾಪಿ!

mysore
30/04/2022

ಮೈಸೂರು: ಕುಡಿಯಲು ಹಣ ನೀಡಲಿಲ್ಲ ಎಂದು ವ್ಯಕ್ತಿಯೋರ್ವ ತಂಗಿಯ ಮಗುವನ್ನೇ ಗೋಡೆಗೆ ಬಡಿದು ಹತ್ಯೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ವರದಿಗಳ ಪ್ರಕಾರ, ಕುಡಿತದ ದಾಸನಾಗಿದ್ದ ಮೈಸೂರಿನ ಕನಕಗಿರಿಯ 30 ವರ್ಷ ವಯಸ್ಸಿನ ರಾಜು ಎಂಬಾತ ಕುಡಿಯಲು ಹಣ ನೀಡುವಂತೆ ತಂಗಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ  ತನ್ನ ತಂಗಿಯ 8 ತಿಂಗಳ ಮಗುವನ್ನು  ಎತ್ತಿ ಗೋಡೆಗೆ ಬಡಿದಿದ್ದಾನೆ.

ಗಂಭೀರವಾಗಿ ಗಾಯಗೊಂಡ  ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.  ಕೃತ್ಯದ ಬಳಿಕ ಆರೋಪಿ ರಾಜು ಸ್ಥಳದಿಂದ ಪರಾರಿಯಾಗಿದ್ದು, ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಿಎಸ್ ಐ ಮರು ಪರೀಕ್ಷೆ ನಿರ್ಧಾರದ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ತಲೆನೋವು!

ವಾಟ್ಸಾಪ್ ನಲ್ಲಿ ಕ್ಯಾಶ್ ಬ್ಯಾಕ್ ಸಿಗಬೇಕಾದರೆ ಏನು ಮಾಡಬೇಕು ಗೊತ್ತಾ?

ಊಟ ನಿರಾಕರಣೆ, ಏಸಿ ಇಲ್ಲದೇ ಚಡಪಡಿಸಿದ ದಿವ್ಯಾ ಹಾಗರಗಿ!

ಮದುವೆ ಮಂಟಪಕ್ಕೆ ನುಗ್ಗಿ ವಧುವನ್ನು ಗುಂಡಿಕ್ಕಿ ಕೊಂದ ಪ್ರಿಯಕರ!

160 ಭಾಷೆಗಳಲ್ಲಿ ತೆರೆಕಾಣಲಿದೆ ಅವತಾರ್‌ 2: ಚಿತ್ರ ಬಿಡುಗಡೆಯ ದಿನಾಂಕ ಫಿಕ್ಸ್

ಇತ್ತೀಚಿನ ಸುದ್ದಿ

Exit mobile version