ತಾರತಮ್ಯ ಮಾಡದೇ ಫಾಝಿಲ್ ಮನೆಗೂ ಸಿಎಂ ಭೇಟಿ ನೀಡಬೇಕು: ಸತೀಶ್ ಜಾರಕಿಹೊಳಿ ಒತ್ತಾಯ
ಬೆಳಗಾವಿ: ಪ್ರವೀಣ್ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಹರ್ಷ ಮನೆಗೂ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರಾದರೆ ಮಾತ್ರವೇ ಸರ್ಕಾರ ಪರಿಹಾರ ನೀಡುತ್ತಿದ್ದು, ಬೇರೆಯವರ ಹತ್ಯೆಯಾದರೆ ಸರ್ಕಾರ ನಯಪೈಸೆ ಪರಿಹಾರ ನೀಡಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರ ಸರಣಿ ಹತ್ಯೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ತಾರತಮ್ಯ ಮಾಡದೇ ಫಾಝಿಲ್ ಮನೆಗೂ ಸಿಎಂ ಭೇಟಿ ನೀಡಬೇಕು. ಈ ಸಂಬಂಧ ಕಾಂಗ್ರೆಸ್ ಒಂದೇ ಹೋರಾಟ ಮಾಡಿದ್ರೆ ಆಗಲ್ಲ, ಜನರು ಜಾಗೃತರಾಗಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು.
ಬಿಜೆಪಿ ಸರ್ಕಾರದ ನಡೆಯಿಂದ ಅವರ ಪಕ್ಷದವರೇ ರೋಸಿ ಹೋಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ನಮಗೆ ರಕ್ಷಣೆ ಇಲ್ಲ ಎಂದು ಹೇಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಮತದ ಲಾಭಕ್ಕೆ ಬಿಜೆಪಿ ಬಳಸುತ್ತಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಎಸೆಯಬಹುದಿತ್ತು ಎನ್ನುವ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ನಡೆದಿರುವ ಎಲ್ಲ ಪ್ರಕರಣಗಳ ಮರು ತನಿಖೆ ನಡೆಸಬೇಕು. ಎಲ್ಲರಿಗೂ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka