ತಾತಾ ಆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ | ದೇವೇಗೌಡ್ರ ಮನೆಯಲ್ಲಿ ಸಂಭ್ರಮ - Mahanayaka
12:09 PM Wednesday 5 - February 2025

ತಾತಾ ಆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ | ದೇವೇಗೌಡ್ರ ಮನೆಯಲ್ಲಿ ಸಂಭ್ರಮ

kumaraswamy
24/09/2021

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ಇದೀಗ ಇಡೀ ಕುಟುಂಬ ಸಂಭ್ರಮದಲ್ಲಿದೆ. ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನಿಸಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಸಂಭ್ರಮ ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಖಿಲ್ ಅವರ ಪತ್ನಿ ರೇವತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಕೂಡ ಆರೋಗ್ಯವಾಗಿದ್ದಾರೆ. ತಾನು ತಾತ ಆಗ್ತಿರೋ ವಿಚಾರ ತಿಳಿದ ತಕ್ಷಣವೇ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.

ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾಸ್ವಾಮಿ, ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಪ್ರತಿಭಟನಾಕಾರನ ದೇಹದ ಮೇಲೆ ಹಾರಿಹಾರಿ ಬಿದ್ದಿದ್ದ ಪತ್ರಕರ್ತ ಅರೆಸ್ಟ್

ಕ್ಯಾನ್ಸರ್ ನ್ನು ಗೆದ್ದವ ಪಾರ್ಟಿಯಲ್ಲಿ ಬಿಯರ್ ಬ್ಯಾರೆಲ್ ಸ್ಫೋಟಗೊಂಡು ಮೃತಪಟ್ಟ!

ಟಾಂಗಾ ಮೂಲಕ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್!

ಮೃತಪಟ್ಟ ಪ್ರತಿಭಟನಾಕಾರನ ಮೃತದೇಹಕ್ಕೆ ಥಳಿಸಿ, ಒದ್ದು ವಿಕೃತಿ ಮೆರೆದ ಪತ್ರಕರ್ತ

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ಕಳೆದ 6 ವರ್ಷಗಳಿಂದ ಈ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನೇ ನೇಮಿಸಿಲ್ಲ!

ಇತ್ತೀಚಿನ ಸುದ್ದಿ