ತಾಯಿಯ ಕಣ್ಣೆದುರೇ ಬಾಲಕಿ ನೀರಿನಲ್ಲಿ ಕೊಚ್ಚಿ ಹೋದಳು! - Mahanayaka
5:04 PM Friday 20 - September 2024

ತಾಯಿಯ ಕಣ್ಣೆದುರೇ ಬಾಲಕಿ ನೀರಿನಲ್ಲಿ ಕೊಚ್ಚಿ ಹೋದಳು!

heavy rain
24/07/2021

ಬೆಳಗಾವಿ:  ರಾಜ್ಯದ ವಿವಿಧೆಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯಬ್ಬರಕ್ಕೆ ಜನಜೀವನ ಅಸ್ವಸ್ಥಗೊಂಡಿದೆ. ಬೆಳಗಾವಿ ಚಿಕ್ಕೋಡಿಯಲ್ಲಿ ಬಾಲಕಿಯೋರ್ವಳು ಹಳ್ಳಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಕಿರಣಾ ವಿಭೂತಿ ಮೃತ ಪಟ್ಟ ಬಾಲಕಿಯಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ರಾಮನಗರ ಕಾಲೋನಿಯಲ್ಲಿ ಬಸ್ ನಿಲ್ದಾಣದಿಂದ ತಾಯಿಯೊಂದಿಗೆ ಮನೆಗೆ ಹೋಗುತ್ತಿದ್ದಾಗ ಹಳ್ಳ ದಾಟಲು ಮುಂದಾಗಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಳು ಎಂದು ತಿಳಿದು ಬಂದಿದೆ.

ಬಾಲಕಿ ನೀರುಪಾಲಾದ ಬಳಿಕ ಎನ್ ಡಿ ಆರ್ ಎಫ್ ತಂಡ ಬಾಲಕಿಗಾಗಿ ತೀವ್ರ ಶೋಧ ನಡೆಸಿದರೂ ಬಾಲಕಿಯ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಬಾಲಕಿಯ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು,ಮ ಮೃತದೇಹವನ್ನು ಮೇಲೆತ್ತಲಾಗಿದೆ. ಇನ್ನೂ ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರು ರೋದನ ಮೊಗಿಲು ಮುಟ್ಟಿದೆ.


Provided by

ಇನ್ನಷ್ಟು ಸುದ್ದಿಗಳು…

ರೆಡ್ ಅಲಾರ್ಟ್: ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

ಭಾರೀ ಮಳೆಗೆ ರಾಜ್ಯಾದ್ಯಂತ ಭಾರೀ ಹಾನಿ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಅಮ್ಮ ಪ್ರತೀ ದಿನ ಜಗಳವಾಡುತ್ತಾಳೆ ಎಂದು ಕೊಂದ ಪುತ್ರ | ಹೆತ್ತವಳ ಕತ್ತು ಹಿಸುಕಿದ ಪುತ್ರ

ಪ್ರಯಾಣಿಕರೇ ಎಚ್ಚರ! | ಭಾರೀ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭಾರೀ ಬಿರುಕು

ಇತ್ತೀಚಿನ ಸುದ್ದಿ