ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪಿ ಅರೆಸ್ಟ್ - Mahanayaka
2:01 AM Wednesday 5 - February 2025

ಹಾಡಹಗಲೇ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪಿ ಅರೆಸ್ಟ್

jnanabharati
10/08/2023

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಉಪವಿಭಾಗ ಜ್ಞಾನಭಾರರತಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಗಲಿನ ವೇಳೆಯಲ್ಲಿ ಮನೆಬೀಗ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಪೊಲೀಸರು ಸುಮಾರು 3,50,000 ರೂ.ಮೌಲ್ಯದ‌ ಸುಮಾರು 59,7 ಗ್ರಾಂ ಚಿನ್ನ ಹಾಗೂ 47.68 ಗ್ರಾಂ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಹಗಲು ವೇಳೆಯಲ್ಲಿ ಕಳವು ಪ್ರಕರಣಗಳ ಪತ್ತೆಗಾಗಿ ನೇಮಿಸಿದ್ದ, ಅಧಿಕಾರಿ ಮತ್ತು ಸಿಬ್ಬಂದಿ ಠಾಣಾ ಸರಹದ್ದಿನ ಹಳೇ ಎಂ.ಓ ಆರೋಪಿಯನ್ನು ದಸ್ತಗಿರಿ ಮಾಡಿ, ಆತನು ನೀಡಿದ ಮಾಹಿತಿ ಮೇರೆಗೆ ಸುಮಾರು 59,7 ಗ್ರಾಂ ತೂಕದ ಚಿನ್ನ ಹಾಗೂ 47,68 ಗ್ರಾಂ ತೂಕದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಪ್ರಕರಣವನ್ನು ಭೇದಿಸುವಲ್ಲಿ ಜ್ಞಾನಭಾರತಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಇವುಗಳ ಒಟ್ಟು ಮೌಲ್ಯ ಸುಮಾರು ರೂ.3,50,000/-ಆಗಿರುತ್ತದೆ. ಈ ಕಾರ್ಯಚರಣೆಯನ್ನು ಬೆಂಗಳೂರು ನಗರದ ಮಾನ್ಯ ಡಿ.ಸಿ.ಪಿ ಪಶ್ಚಿಮ ವಿಭಾಗದ ಲಕ್ಷ್ಮಣ್ , ನಿಂಬರಗಿ, ಕೆಂಗೇರಿ ಉಪ ವಿಭಾಗದ‌ ಸಹಾಯಕ ಪೊಲೀಸ್ ಆಯುಕ್ತ ಹೆಚ್‌.ಎಸ್‌.ಪರಮೇಶ್ವರ್ ಇವರುಗಳ‌ಮಾರ್ಗದರ್ಶನದಲ್ಲಿ ಜ್ಞಾನಭಾರತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್  ಸುಬ್ರಹ್ಮಣಿ ನೇತೃತ್ವದ ಸಿಬ್ಬಂದಿ ಆರೋಪಿಯನ್ನು ಪತ್ತೆ ಮಾಡಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ