10:08 PM Wednesday 12 - March 2025

ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿ ವಿಕೃತಿ ಮೆರೆದಿದ್ದ  ಆರೋಪಿ ಅರೆಸ್ಟ್!

belagavi
05/01/2024

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿ ವಿಕೃತಿ ಮೆರೆದಿದ್ದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕಲ್ಯಾಣಿ ಜ್ಯೋತಿಬಾ ಮೋರೆ (44) ಬಂಧಿತ ಆರೋಪಿಯಾಗಿದ್ದು, ಆರೋಪಿಯನ್ನು ಬಂಧಿಸಿರುವ ಕಾಕತಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬಸುರ್ಟೆ ಗ್ರಾಮದಲ್ಲಿ ಮಂಗಳವಾರ ಈ ವಿಲಕ್ಷಣ ಘಟನೆ ನಡೆದಿತ್ತು. ಸಂತ್ರಸ್ತೆ ಅಂಗನವಾಡಿ ಕಾರ್ಯಕರ್ತೆ ಸುಗಂಧಾ ಮೋರೆ (50) ಅವರ  ಮಕ್ಕಳು ಹಿಂದಿನ ದಿನ ಆರೋಪಿಯ ತೋಟದಿಂದ ಹೂವುಗಳನ್ನು ಕಿತ್ತಿದ್ದರು   ಎಂದು ಆರೋಪಿಸಿದ ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ ಜಗಳವಾಡಿ ಮೂಗು ಕತ್ತರಿಸಿದ್ದಾನೆ.

ಇದರಿಂದಾಗಿ ತೀವ್ರ ರಕ್ತಸ್ರಾವಗೊಂಡಿದ್ದ ಸುಗಂಧಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಘಟನೆಯ ಬಳಿಕ ಪರಾರಿಯಾಗಿದ್ದ  ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version