ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಆಟೋ: ಮಹಿಳೆ ಸಜೀವ ದಹನ
ಮಹಾರಾಷ್ಟದ ಥಾಣೆಯಲ್ಲಿ ರಸ್ತೆ ವಿಭಜಕ್ಕೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಬೆಂಕಿಗೆ ಆಹುತಿಯಾಗಿ ಮಹಿಳೆ ಸಜೀವ ದಹನಗೊಂಡ ಆಘಾತಕಾರಿ ಘಟನೆ ನಡೆದಿದೆ.
ಘೋಡ್ಬಂದರ್ ರಸ್ತೆಯ ಗೈಮುಖ್ ಪ್ರದೇಶದಲ್ಲಿ ಬೆಳಿಗ್ಗೆ 5:45ಕ್ಕೆ ಆಟೊದಲ್ಲಿ ಮಹಿಳೆ ಥಾಣೆ ನಗರದಿಂದ ಭಾಯಂದರ್ ಕಡೆಗೆ ಚಲಿಸುತ್ತಿದ್ದಾಗ ಆಟೋ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶಶನ್ ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶ ಮುಖ್ಯಸ್ಥ ಅವಿನಾಶ್ ಸಾವಂತ್ ತಿಳಿಸಿದರು.
ಈ ವೇಳೆ ಪ್ರಯಾಣಿಕ ಮಹಿಳೆ ವಾಹನದೊಳಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ. ಚಾಲಕ ರಾಜೇಶ್ ಕುಮಾರ್ (45) ಅವರು, ತೀವ್ರ ಸುಟ್ಟ ಗಾಯಗಳಾಗಿದ್ದು, ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್ ಡಿಎಂಸಿ ಅರ್ಧ ಗಂಟೆಯೊಳಗೆ ಬೆಂಕಿಯನ್ನು ನಂದಿಸಿದರು.
ಮೃತ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw