“ಭಟ್ಕಳದಲ್ಲಿ ಹಾರಿಸಲಾದ ಧ್ವಜ ಪಾಕಿಸ್ತಾನದ ಧ್ವಜ ಅಲ್ಲ”
ಭಟ್ಕಳ: ಹೊನ್ನಾವರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಸಂಭ್ರಮಿಸುತ್ತಿದ್ದ ವೇಳೆ ಇಲ್ಲಿನ ಶಂಶುದ್ದೀನ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ ಎಂಬ ವದಂತಿಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್ವಜ ಅಲ್ಲ, ವಾಸ್ತವವಾಗಿ ಅಲ್ಲಿದ್ದ ವ್ಯಕ್ತಿಗಳು ತಮ್ಮ ಸ್ವಂತ ವಿವೇಚನೆಯಿಂದ ಧಾರ್ಮಿಕ ಧ್ವಜ ಬಳಸಿದ್ದಾರೆ. ಇದು ಪಾಕಿಸ್ತಾನ ಧ್ವಜ ಅಲ್ಲ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಸ್ಪಷ್ಟಪಡಿಸಿರುವುದರಿಂದಾಗಿ ಯಾವುದೇ ದೂರುಗಳು ದಾಖಲಾಗಿಲ್ಲ ಮತ್ತು ಕ್ರಮಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ವದಂತಿ ಹರಡಬಾರದು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸೂಕ್ಷ್ಮ ವಿಷಯ ಪೋಸ್ಟ್ ಮಾಡಬಾರದು. ಭಟ್ಕಳದಲ್ಲಿ ಹಾರಿಸಿರುವುದು ಕೇಸರಿ, ಹಸಿರು ಧಾರ್ಮಿಕ ಧ್ವಜವೇ ಹೊರತು ಪಾಕಿಸ್ತಾನ ಧ್ವಜ ಅಲ್ಲ ಎಂಬುದನ್ನು ನಾವು ದೃಢಪಡಿಸಿದ್ದೇವೆ. ಕೋಮುಗಲಭೆ ಉಂಟು ಮಾಡುವ ಯಾವುದೇ ತಪ್ಪು ಮಾಹಿತಿ ಹಂಚಿಕೊಳ್ಳದಂತೆ ನಾವು ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ವಿನಂತಿ ಮಾಡುತ್ತೇವೆ ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw