ಸ್ಪೀಕರ್ ಖಾದರ್ ಗೆ ಅಭಿನಂದಿಸಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ - Mahanayaka
6:21 PM Thursday 12 - December 2024

ಸ್ಪೀಕರ್ ಖಾದರ್ ಗೆ ಅಭಿನಂದಿಸಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ

17/06/2023

ದಕ್ಷಿಣಕನ್ನಡ: ವಿಧಾನಸಭೆಯ ಸ್ಪೀಕರ್, ಶಾಸಕ ಯು.ಟಿ.ಖಾದರ್ ಅವರನ್ನ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. 

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಾಜ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ಕಳೆದ ಆದಿತ್ಯವಾರ ಉಳ್ಳಾಲದ ಮಹಾತ್ಮಗಾಂಧಿ ರಂಗ ಮಂದಿರದಲ್ಲಿ ಶಾಸಕರಿಗೆ ನಡೆದ ನಾಗರಿಕ ಸನ್ಮಾನಕ್ಕೂ ಶುಭ ಕೋರಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಕಿಡಿಗೇಡಿಗಳು ಐದಾರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ ಕೂಗಳತೆಯ ಅಂತರದಲ್ಲಿ ಹಾಕಲಾಗಿದ್ದ ಫ್ಲೆಕ್ಸನ್ನೂ ಹರಿದು ಹಾಕಿದ್ದಾರೆ.

ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ. ಫ್ಲೆಕ್ಸ್ ಗಳನ್ನ ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಆಳವಡಿಸಿರುವುದರಿಂದ ಈವರೆಗೂ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ