ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತ
27/07/2024
ಮಂಡ್ಯ: ಕೆಆರ್ ಎಸ್ ಡ್ಯಾಂನಿಂದ 1,30,000 ಕ್ಯುಸೆಕ್ ನೀರನ್ನು ಹರಿ ಬಿಡಲಾಗಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿಮಿಷಾಂಭ ದೇವಸ್ಥಾನದ ಮುಂಭಾಗ ಸಂಪೂರ್ಣ ಜಲಾವೃತಗೊಂಡಿದೆ.
ನಿನ್ನೆ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿತ್ತು. ಇಂದು ದೇವಸ್ಥಾನದ ಮುಂಭಾಗ, ಪಾರ್ಕಿಂಗ್ ಸ್ಥಳ, ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ.
ಗೋಸಾಯ್ ಘಾಟ್ ಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು ನಡೆಯುತ್ತಿದ್ದ ಪಿಂಡಪ್ರಧಾನ ಹಾಗೂ ಇತರ ಕೈಂಕರ್ಯಗಳಿಗೆ ನಿಷೇಧ ಹೇರಲಾಗಿದೆ. ಅಲ್ಲದೇ ಅಪಾಯಕಾರಿಯಾಗಿ ಹರಿಯುತ್ತಿರುವ ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: