‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಜನರನ್ನು ಸಂಘ ಪರಿವಾರ ಬೇರ್ಪಡಿಸುತ್ತಿದೆ: ಬೃಂದಾ ಕಾರಟ್ ಆರೋಪ
ನವದೆಹಲಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಸಂಘ ಪರಿವಾರ ಜನರನ್ನು ಬೇರ್ಪಡಿಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಾಯಕಿ ಬೃಂದಾ ಕಾರಟ್ ಆರೋಪಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಹೇಳಲಾಗಿರುವುದು ಪೂರ್ಣ ಸತ್ಯವಲ್ಲ, ಭಾಗಶಃ ಸತ್ಯವಷ್ಟೇ. ಅದನ್ನು ತಮ್ಮ ಲಾಭಕ್ಕೆ ಸಂಘ ಪರಿವಾರ ಬಳಸಿಕೊಳ್ಳುತ್ತಿದೆ. ಅಲ್ಲದೆ, ಜನರನ್ನು ಬೇರ್ಪಡಿಸಲು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಆಯುಧವನ್ನಾಗಿ ಬಳಸಿಕೊಳ್ಳುತ್ತಿರುವುದಾಗಿ ಅವರು ದೂಷಿಸಿದ್ದಾರೆ.
ಆ ಸಮಯದಲ್ಲಿ ಪಾಕ್ ಬೆಂಬಲಿತ ಉಗ್ರರು ಹಿಂದೂಗಳನ್ನು ಮಾತ್ರವೇ ಅಲ್ಲ ತಮ್ಮ ಧೋರಣೆಯನ್ನು ಒಪ್ಪದ ಮುಸ್ಲಿಮರನ್ನೂ ಹತ್ಯೆಗೈದಿದ್ದಾರೆ. ಮುಸ್ಲಿಂ ಶಾಸಕರೂ ಮೃತಪಟ್ಟಿದ್ದಾರೆ. ಈ ಬಗ್ಗೆ ಸಿನಿಮಾ ಬೆಳಕು ಚೆಲ್ಲುವುದಿಲ್ಲ ಎಂದು ಬೃಂದಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾ.11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಮತ್ತು ಇತರರು ನಟಿಸಿದ್ದಾರೆ. ಮಧ್ಯಪ್ರದೇಶ, ಹರಿಯಾಣ, ಉತ್ತರ ಪ್ರದೇಶ, ಗುಜರಾತ್, ತ್ರಿಪುರ, ಗೋವಾ, ಉತ್ತರಾಖಂಡ್ ಸೇರಿದಂತೆ ಇತರ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಸಿದ್ದರಾಮಯ್ಯ ಖಂಡನೆ
ಬರೋಬ್ಬರಿ 6 ಆಟೋಗಳನ್ನು ಕಳವು ಮಾಡಿದ್ದ 16 ವರ್ಷದ ಬಾಲಕನ ಸೆರೆ
ಭಾರತದಿಂದ ಕಳ್ಳಸಾಗಣೆಯಾಗಿದ ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಆಸ್ಟ್ರೇಲಿಯಾ ಒಪ್ಪಿಗೆ