ಬಾಲಕಿಯನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: ಬಾಲಕಿ ಸಾವನ್ನಪ್ಪಿದ ಮರುದಿನವೇ ಚಿರತೆ ಸೆರೆ - Mahanayaka

ಬಾಲಕಿಯನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: ಬಾಲಕಿ ಸಾವನ್ನಪ್ಪಿದ ಮರುದಿನವೇ ಚಿರತೆ ಸೆರೆ

chamarajanagara
16/07/2023

ಚಾಮರಾಜನಗರ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.  ಚಿರತೆ ಬಾಲಕಿಯ ಮೇಲೆ ದಾಳಿ ನಡೆಸಿ 18 ದಿನಗಳಾದರೂ ಬೋನಿಗೆ ಬಿದ್ದಿರಲಿಲ್ಲ. ಇದೀಗ  18 ದಿನಗಳ ನಂತರ ಬಲೆಗೆ ಬಿದ್ದಿದೆ.

ಚಿರತೆ ದಾಳಿಯಿಂದ 18 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ನಿನ್ನೆಯಷ್ಟೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಳು. ಕಳೆದ ಜೂ‌. 26 ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಸುಶೀಲಾ ಎಂಬ ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿತ್ತು. ಬಾಲಕಿಯನ್ನು ಹೊತ್ತೊಯ್ಯುವ ಪ್ರಯತ್ನದಲ್ಲಿದ್ದಾಗ ಗ್ರಾಮಸ್ಥರ ಚಿರಾಟ ಕೇಳಿ ಬಾಲಕಿಯನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿತ್ತು.

ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಬಾಲಕಿ  ಮೈಸೂರಿನ ಚೆಲುವಂಬ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದವಡೆ ಮೂಳೆ ಮುರಿದಿದ್ದ ಪರಿಣಾಮ ಬಾಲಕಿಯ ಮುಖ ಊದಿಕೊಂಡಿತ್ತು. ಕಳೆದ 18 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಜು‌. 11ರಂದು ಆಪರೇಷನ್ ಕೂಡ ಮಾಡಲಾಗಿತ್ತು,  ಸತತ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಳು.

*ಚಿರತೆ ಸೆರೆಗಾಗಿ ಚಿರತೆ ದಾಳಿ ನಡೆಸಿದ ಸ್ಥಳ ಹಾಗೂ ಅಕ್ಕಪಕ್ಕದಲ್ಲಿ ಮೂರು ಬೋನ್ ಗಳನ್ನು ಸಹ ಇಡಲಾಗಿತ್ತು. ಇದುವರೆಗೂ ಚಿರತೆಯನ್ನು ಹಿಡಿಯುವಲ್ಲಿ  ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿದ್ದರು. ಇಂದು ಬೆಳಗಿನ‌ ಜಾವ ಅರಣ್ಯ ಇಲಾಖೆ ಇಟ್ಟಿದ್ದ ಬೋನ್ ಗೆ ಚಿರತೆ ಬಿದ್ದಿದೆ.

ಬಾಲಕಿ ಮೇಲೆ ಚಿರತೆ ಭೀಕರ ದಾಳಿ ನಡೆಸಿದಂದಿನಿಂದ ಇಂದಿನ ವರೆಗೂ ಆತಂಕದಿಂದ ಓಡಾಡುತ್ತಿದ್ದ ಜನರು ಇದೀಗ ಚಿರತೆ ಸೆರೆ ಹಿಡಿದ ಹಿನ್ನೆಲೆಯಲ್ಲಿ ನಿಟ್ಟುಸಿರು ಬಿಟ್ಟಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ