ಚಾರ್ಮಾಡಿ ಘಾಟ್ ನಲ್ಲಿ ಟ್ರಕ್ಕಿಂಗ್ ಗೆ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಕೊನೆಗೂ ಪತ್ತೆ
ಚಿಕ್ಕಮಗಳೂರು: ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ನಿನ್ನೆ ಸಂಜೆ ನಡೆದಿತ್ತು. ಇದೀಗ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದಾರೆ.
ನಿನ್ನೆ ಸಂಜೆ ರಾಣಿ ಝರಿ ಪಾಲ್ಸ್ ಹೋಗಿ ಅಲ್ಲಿಂದ ಟ್ರಕ್ಕಿಂಗ್ ತೆರಳಿದ್ದ ಬೆಂಗಳೂರಿನ ಜೆ.ಪಿ.ನಗರದ ಪರೋಸ್ ಅಗರ್ ವಾಲ್ ಎಂಬವರು ನಾಪತ್ತೆಯಾಗಿದ್ದರು. ಇದೇ ವೇಳೆ ಸ್ಥಳೀಯರು ಹಾಗೂ ಪೊಲೀಸರು ತೀವ್ರವಾಗಿ ಹುಡುಕಾಟ ನಡೆಸಿದ್ದರು.
ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ, ಸ್ಥಳೀಯರಿಂದ ಶೋಧ ನಡೆಸಿದಾಗ ಕೊನೆಗೆ ರಾತ್ರಿ ವೇಳೆ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಅರಣ್ಯದಲ್ಲಿ ಪರೋಸ್ ಅಗರ್ ವಾಲ್ ಪತ್ತೆಯಾಗಿದ್ದಾರೆ.
ಪರೋಸ್ ಅಗರ್ ವಾಲ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy