ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ ಮಗುವನ್ನು ಕ್ಯಾಬ್ ನಿಂದ ಹೊರಗೆಸೆದ ದುಷ್ಟರು
13/12/2022
ಪಾಲ್ಘರ್: ಮಗುವಿನ ತಾಯಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ 10 ತಿಂಗಳ ಮಗುವನ್ನು ಕ್ಯಾಬ್ ನಿಂದ ಹೊರಗೆಸೆದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ.
ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಚಲಿಸುವ ಕಾರಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಜಯ್ ಕುಶ್ವಾಹಾ ಮತ್ತು ಇತರರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 304 ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕ್ಯಾಬ್ ನಿಂದ ಹೊರಗೆಸೆಲ್ಪಟ್ಟ ಮಗು ಸಾವನ್ನಪ್ಪಿದ್ದು, ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka