ತಂದೆಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಂದ ಮಗ: ಹತ್ಯೆಗೆ ಕಾರಣ ಏನು? - Mahanayaka
9:15 AM Tuesday 24 - December 2024

ತಂದೆಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಂದ ಮಗ: ಹತ್ಯೆಗೆ ಕಾರಣ ಏನು?

thimmanna
06/11/2023

ರಾಯಚೂರು: ಮಾದಕ ವಸ್ತುಗಳನ್ನು ಸೇವಿಸಿ, ಪತ್ನಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಗನೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದಲ್ಲಿ ನಡೆದಿದೆ.

ಬಂಡಿ ತಿಮ್ಮಣ್ಣ(55) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಮಗ ಶೀಲವಂತ ತಂದೆಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.

ತಂದೆ ಪ್ರತಿನಿತ್ಯ ಗಾಂಜಾ, ಮದ್ಯ ಸೇವನೆ ಮಾಡಿ ಬಂದು ತಾಯಿಗೆ ಕಿರುಕುಳ ನೀಡುತ್ತಿದ್ದನ್ನು ಕಂಡು ಬೇಸತ್ತ ಮಗ ತಂದೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ.

ಇತ್ತೀಚಿನ ಸುದ್ದಿ