ಟೋಲ್ ದರ ಏರಿಕೆ: ಚುನಾವಣೆಯಲ್ಲಿ ಉತ್ತರಿಸಲು ಜನತೆಗೆ ಹೋರಾಟ ಸಮಿತಿ ಮನವಿ - Mahanayaka
6:11 PM Thursday 12 - December 2024

ಟೋಲ್ ದರ ಏರಿಕೆ: ಚುನಾವಣೆಯಲ್ಲಿ ಉತ್ತರಿಸಲು ಜನತೆಗೆ ಹೋರಾಟ ಸಮಿತಿ ಮನವಿ

toll
01/04/2023

ಜನತೆಯ ವಿರೋಧದ ಹೊರತಾಗಿಯು ಕೇಂದ್ರದ ಬಿಜೆಪಿ ಸರಕಾರ ಟೋಲ್ ದರವನ್ನು ಶೇಕಡಾ 25 ರಷ್ಟು ಏರಿಕೆ ಮಾಡಿದೆ. ಮೊದಲೇ ದರ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದು ಹೆದ್ದಾರಿ ಗುತ್ತಿಗೆಗಳನ್ನು ಪಡೆದಿರುವ ದೊಡ್ಡ ಕಂಪೆನಿಗಳ ಪರವಾದ ನಿರ್ಲಜ್ಜ ಸುಲಿಗೆಯಲ್ಲದೆ ಮತ್ತೇನು ಅಲ್ಲ. ಇಂತಹ ಹೆದ್ದಾರಿ ಸುಲಿಗೆ ನೀತಿಗಾಗಿ ಮುಂಬರುವ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಜನತೆಯಲ್ಲಿ ಮನವಿ ಮಾಡಿದೆ.

ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇ ಮಾತ್ರವಲ್ಲದೆ ರಾಜ್ಯಾದ್ಯಂತ ಎಲ್ಲಾ ಟೋಲ್ ಗೇಟ್ ಗಳಲ್ಲಿಯೂ ಸುಮಾರು 25 ಶೇಕಡಾ ದರ ಹೆಚ್ಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಐದು ಟೋಲ್ ಗೇಟ್ ಗಳಲ್ಲಿಯೂ ಅತಿ ಹೆಚ್ಚಿನ ಪ್ರಮಾಣದಲ್ಲಿ ದರ ಏರಿಸಲಾಗಿದೆ.

ಜನತೆ ಇಂದು ಪ್ರಯಾಣಕ್ಕಾಗಿ ಹೆದ್ದಾರಿಗಳನ್ನು ಪ್ರವೇಶಿಸಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಪ್ರತಿಭಟನೆ, ಹೋರಾಟದ ಜೊತೆಗೆ ರಾಜಕೀಯ ಪ್ರಜ್ಞಾವಂತಿಕೆ ಪ್ರದರ್ಶಿಸಿದರೆ ಮಾತ್ರ ಆಳುವ ಸರಕಾರಗಳಿಗೆ, ರಾಜಕೀಯ ಪಕ್ಷಗಳಿಗೆ ಭಯ ಮೂಡಲು ಸಾಧ್ಯ ಎಂದಿದೆ.

ಜನರು ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಸಂದರ್ಭದಲ್ಲಿ ಈ ಮಟ್ಟಿಗಿನ ದರ ಏರಿಕೆಗೆ ಪ್ರಬಲವಾದ ಪ್ರತಿರೋಧ ತೋರಿಸಲೇಬೇಕಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಖಾಸಗಿ ಕಂಪೆನಿಗಳ ಲಾಭಕೋರತನಕ್ಕಾಗಿ ಜನರ ಹಿತ ಬಲಿಕೊಡುವ ಸರಕಾರಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಬೇಕು ಎಂದು ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ