ರಾಜ್ಯ ನಾಲ್ಕು ಜಿಲ್ಲೆಗಳ ಶಾಲಾಕಾಲೇಜುಗಳಲ್ಲಿ ಕಳವು: ಇಬ್ಬರು ಆರೋಪಿಗಳ ಬಂಧನ
ಉಡುಪಿ: ಶಾಲಾ ಕಾಲೇಜುಗಳಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ನ.21ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಆವರ್ಸೆ ಗ್ರಾಮದ ಬಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ(59) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್ಎಸ್ ರಸ್ತೆಯ ಜಾಹೀದ ಸಿನಾನ್(32) ಎಂದು ಗುರುತಿಸಲಾಗಿದೆ. ಇವರಿಂದ ಬೈಕು, ಮೊಬೈಲ್, 10,000ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಕಳೆದ 5-6 ತಿಂಗಳಿನಿಂದ ಶಾಲಾ ಕಾಲೇಜುಗಳಿಗೆ ನುಗ್ಗಿ ಹಣ ಹಾಗೂ ಸೊತ್ತುಗಳು ಕಳ್ಳತನ ಮಾಡುತ್ತಿರುವ ಕುರಿತು ಉಡುಪಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿದ್ದವು. ಈ ಬಗ್ಗೆ ರಚಿಸಲಾದ ವಿಶೇಷ ತಂಡವು ಆರೋಪಿ ಪತ್ತೆಗೆ ಎಲ್ಲ ಶಾಲಾ ಕಾಲೇಜುಗಳ ಮಾಹಿತಿ, ಅಪರಾಧ ನಡೆದ ದಿನಾಂಕ ಹಾಗೂ ಇನ್ನಿತರ ಮಾಹಿತಿಯನ್ನು ಆಧರಿಸಿ, ಸಿಸಿ ಕ್ಯಾಮೆರಾಗಳ ಪರಿಶೀಲನೆ, ಲಾಡ್ಜ್ ಪರಿಶೀಲನೆ, ಜೈಲಿನಿಂದ ಬಿಡುಗಡೆಯಾದ ಕಳ್ಳತನ ಪ್ರಕರಣದ ಆರೋಪಿ ಗಳ ಮಾಹಿತಿ, ತಾಂತ್ರಿಕ ಮಾಹಿತಿಯನ್ನು ಕಲೆಹಾಕಿ ಆರೋಪಿಗಳನ್ನು ಬಂಧಿಸಿದೆ.
ಕುಮಾರಸ್ವಾಮಿ ಭಟ್ಕಳ ನಗರ ಠಾಣೆಯಲ್ಲಿ 5 ಮನೆ ಕಳ್ಳತನ, ಹೊನ್ನಾವರ ಠಾಣೆಯಲ್ಲಿ 4 ಮನೆ ಕಳ್ಳತನ, ಹಾಸನ ಜಿಲ್ಲೆ ಬೇಲೂರು ಠಾಣೆಯಲ್ಲಿ 4 ಮನೆ ಕಳ್ಳತನ ಪ್ರಕರಣದಲ್ಲಿ ಹಳೆ ಆರೋಪಿಯಾಗಿದ್ದಾನೆ. ಈ ಪ್ರಕರಣಗಳಿಗೆ ಸಂಬಂಧಿ ಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೆ ಒಳಪಟ್ಟು 2014 ರಿಂದ 2021 ರವರೆಗೆ ಸುಮಾರು 7 ವರ್ಷಗಳ ಕಾಲ ಕಾರವಾರ ಜೈಲ್ನಲ್ಲಿದ್ದು ಶಿಕ್ಷೆ ಅನುಭವಿಸಿದ್ದನು.
ಜಾಹೀದ ಸಿನಾನ್ ಕಳ್ಳತನ ನಡೆಸುವುದಕ್ಕಾಗಿಯೇ ಉಡುಪಿ ಸಂತೆಕಟ್ಟೆ ಬಳಿ ಬಾಡಿಗೆ ಮನೆಯನ್ನು ಮಾಡಿಕೊಂಡಿದ್ದನು. ಕುಮಾರ ಸ್ವಾಮಿಯನ್ನು ಕರೆಯಿಸಿ ಕೊಂಡು ಒಟ್ಟಿಗೆ ಕಳ್ಳತನ ಮಾಡುತ್ತಿದ್ದರು. ಕುಮಾರಸ್ವಾಮಿ 2021ರಲ್ಲಿ ಕಾರವಾರ ಜೈಲಿನಿಂದ ಬಿಡುಗಡೆಯಾದ ನಂತರ ಹೆಜಮಾಡಿಯ ಜಾಹೀದ್ ಸಿನಾನ್ ಜೊತೆ ಸೇರಿ ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 37 ಕಡೆ ಶಾಲಾ- ಕಾಲೇಜಿಗಳಿಗೆ ನುಗ್ಗಿ ಕಳ್ಳತನ ಮಾಡಿದ್ದನು.
ಇವರು ಉಡುಪಿ ಜಿಲ್ಲೆಯ ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕುಂದಾಪುರ, ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ, ಮಲ್ಪೆ, ಕಾರ್ಕಳ, ಪಡುಬಿದ್ರೆ ಠಾಣಾ ವ್ಯಾಪ್ತಿಯ ಒಟ್ಟು 27 ಕಡೆ ಶಾಲಾ ಕಾಲೇಜುಗಳಿಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಠಾಣೆಯಲ್ಲಿ 2 ಪ್ರಕರಣ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ರಿಪ್ಪನಪೇಟೆ, ನಗರ ಠಾಣೆಗಳಲ್ಲಿ 6 ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಮುಡೇಶ್ವರ ಠಾಣೆಯಲ್ಲಿ 2 ಪ್ರಕರಣ ಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸಿ ಎಲ್ಲ ಪ್ರಕರಣಗಳನ್ನು ಭೇದಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka