ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು ಜುವೆಲ್ಲರಿಯಲ್ಲಿ ಚಿನ್ನದ ಸರ ಕಳವು
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಈ ಬಗ್ಗೆ ಉಡುಪಿ ಮಾರುತಿ ವಿಥೀಕಾ ನಿವಾಸಿ 59 ವರ್ಷದ ಬಿ.ಸತ್ಯನಾರಾಯಣ ಶೇಟ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಇವರು ಕನಕದಾಸ ರಸ್ತೆಯಲ್ಲಿ ಪಾಂಡುರಂಗ ಜುವೆಲ್ಲರ್ಸ್ ಎಂಬ ಆಭರಣದ ಅಂಗಡಿ ನಡೆಸುತ್ತಿದ್ದಾರೆ. ಇವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಅಪರಿಚಿತ ಮಹಿಳೆಯರು ಮತ್ತು ಓರ್ವ ಪುರುಷ ಬಂದಿದ್ದು, ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನದ ಸರವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಕಳವಾದ ಚಿನ್ನದ ಸರದ ಮೌಲ್ಯ 22 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka