ತೆಕ್ಕಟ್ಟೆ: ಸಾಕು ನಾಯಿ ಮೇಲೆ ಚಿರತೆ ದಾಳಿ - Mahanayaka
3:55 AM Wednesday 11 - December 2024

ತೆಕ್ಕಟ್ಟೆ: ಸಾಕು ನಾಯಿ ಮೇಲೆ ಚಿರತೆ ದಾಳಿ

dog
02/06/2023

ಕುಂದಾಪುರ: ತೆಕ್ಕಟ್ಟೆ ಗ್ರಾಪಂ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಮನೆಯೊಂದರ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಮಾಲಾಡಿಯ ಸತೀಶ್ ದೇವಾಡಿಗ ಎಂಬವರ ನಿವಾಸದ ಬಳಿ ಬಂದ‌ ಚಿರತೆಯು ಸಾಕು‌ನಾಯಿ ಹೊತ್ತೊಯ್ಯಲು ಯತ್ನಿಸಿದೆ. ಮನೆಯ ಮಹಿಳೆ ಸಮೀಪದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದು ನಾಯಿ ಬೊಗಳುವ ಶಬ್ದ ಕೇಳಿ ಹೊರಬಂದಾಗ ನಾಯಿ ಬಿಟ್ಟು ಚಿರತೆ ಹಾಡಿಯತ್ತ ಓಡಿ ಮರೆಯಾಗಿದೆ.

ಚಿರತೆ ದಾಳಿಯಿಂದ ನಾಯಿ ಕುತ್ತಿಗೆ ಭಾಗಕ್ಕೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ