ಸಿಎಂ ಕುರ್ಚಿಗಾಗಿ ಹನಿಟ್ರ್ಯಾಪ್ ಯತ್ನ ನಡೆದಿದೆ: ಆರ್.ಅಶೋಕ್ ಆರೋಪ

ಬೆಂಗಳೂರು: ಸಿಎಂ ಕುರ್ಚಿಗಾಗಿ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದು, ದಲಿತ ಮಂತ್ರಿಗಳಿಗೇ ಸರ್ಕಾರದಲ್ಲಿ ರಕ್ಷಣೆ ಇಲ್ಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.
ವಿಧಾನ ಸಭಾ ಕಲಾಪ ಮುಂದೂಡಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜಣ್ಣ ಸರ್ಕಾರದ ಮಂತ್ರಿಯಾಗಿದ್ದಾರೆ, ಅವರೇ ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಆರೋಪ ಮಾಡಿದ್ದಾರೆ. ಈ ಸರ್ಕಾರದಲ್ಲಿ ದಲಿತ ಮಂತ್ರಿಗಳಿಗೇ ರಕ್ಷಣೆ ಇಲ್ಲ ಎಂದು ಅವರು ಕಿಡಿಕಾರಿದರು.
48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಅಂತ ರಾಜಣ್ಣ ಆರೋಪ ಮಾಡಿದ್ದಾರೆ. ಈ ಆರೋಪಕ್ಕೆ ಸರಿಯಾಗಿ ಉತ್ತರ ನೀಡಿಲ್ಲ, ಇದು ಗಂಭೀರ ಪ್ರಕರಣ, ಎಲ್ಲ ಶಾಸಕರ, ಸದನದ, ರಾಜ್ಯದ ಗೌರವದ ಪ್ರಶ್ನೆ ಎಂದು ಅವರು ಹೇಳಿದ್ದಾರೆ.
ಈ ಪ್ರಕರಣ ಸಿಬಿಐ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಆರ್.ಅಶೋಕ್ ಇದೇ ವೇಳೆ ಒತ್ತಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: