ಪಾಕ್ ಸಹಕಾರ ಪಡೆದುಕೊಳ್ಳುವ ಪರಿಸ್ಥಿತಿ ಅಫ್ಗಾನ್ ಗೆ ಬಂದಿಲ್ಲ: ಹಮೀದ್ ಕರ್ಜೈ
ಕಾಬೂಲ್: ವಿದೇಶದ ಮಾನವ ಸಂಪನ್ಮೂಲ ಸಹಕಾರ ಪಡೆದುಕೊಳ್ಳುವ ಪರಿಸ್ಥಿತಿ ನಮ್ಮ ದೇಶಕ್ಕೆ ಬಂದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ಅಫ್ಗಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಮಾನವೀಯತೆ ಆಧಾರದ ಮೇಲೆ ಯುದ್ಧಪೀಡಿತ ಅಫ್ಗಾನಿಸ್ತಾನಕ್ಕೆ ನುರಿತ ಮಾನವ ಸಂಪನ್ಮೂಲ ಒದಗಿಸಲು ಬದ್ದ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಹಮೀದ್ ಕರ್ಜೈ, ಅಫ್ಗಾನಿಸ್ತಾನದಲ್ಲಿ ದೇಶ ವಿದೇಶದಿಂದ ಉನ್ನತ ಶಿಕ್ಷಣ ಪಡೆದ ಸಾವಿರಾರು ಯುವಕ ಯುವತಿಯರಿದ್ದಾರೆ. ವಿದೇಶದ ಮಾನವ ಸಂಪನ್ಮೂಲ ಸಹಕಾರ ಪಡೆದುಕೊಳ್ಳುವ ಪರಿಸ್ಥಿತಿ ನಮ್ಮ ದೇಶಕ್ಕೆ ಬಂದಿಲ್ಲ ಎಂದರು.
ಅಲ್ಲದೇ ತಾಲಿಬಾನ್ ಮುಖಂಡರು ದೇಶದ ವಿದ್ಯಾವಂತ ಯುವಕ-ಯುವತಿಯರಿಗೆ ಸೂಕ್ತ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು. ವಿದೇಶದಲ್ಲಿರುವ ಅಫ್ಗಾನಿಸ್ತಾನ ನಾಗರಿಕರನ್ನು ಸ್ವದೇಶಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ಜೈ ಮನವಿ ಮಾಡಿದ್ದಾರೆ.
ಇತ್ತೀಚೆಗೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಅಫ್ಗಾನಿಸ್ತಾನದಲ್ಲಿ ಮಾನವ ಸಂಪನ್ಮೂಲದ ಕೊರತೆ ಭಾರೀ ಕಾಡುತ್ತಿದೆ ಎಂದು ವರದಿ ಮಾಡಿತ್ತು. ಈ ಬಗ್ಗೆ ಕಳೆದ ಶುಕ್ರವಾರ ಮಾತನಾಡಿದ್ದ ಇಮ್ರಾನ್ ಖಾನ್, ನಾಗರಿಕ ಬಿಕ್ಕಟ್ಟಿನಿಂದ ಪಾರಾಗಲು ನಾವು ನುರಿತ ಮಾನವ ಸಂಪನ್ಮೂಲವನ್ನು ಅಫ್ಗನ್ ಗೆ ಕಳಿಸಿಕೊಡಲು ಸಿದ್ದ ಎಂದಿದ್ದರು. ಇದರಿಂದ ಉಭಯ ದೇಶಗಳ ನಡುವಿನ ಸೌಹಾರ್ಧ ವಾತಾವರಣ ನಿರ್ಮಿಸಲು ಇದು ಸಹಕಾರಿ ಎಂದು ಪ್ರತಿಪಾದಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲಂಚ ಪ್ರಕರಣ: ಸಿಬಿಐನಿಂದ ಗೇಲ್ ನಿರ್ದೇಶಕನ ಇ.ಎಸ್.ರಂಗನಾಥನ್ ಬಂಧನ
ಬೆಳಗಾವಿಯಲ್ಲಿ ಮತ್ತೆ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಕಿಡಿಗೇಡಿಗಳು
ಹೆಬ್ರಿ: ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಟೆಸ್ಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ದಿಢೀರ್ ರಾಜೀನಾಮೆ ಬಗ್ಗೆ ಸೌರವ್ ಗಂಗೂಲಿ ಹೇಳಿದ್ದೇನು?
ಪ್ರಚೋದನಾಕಾರಿ ಭಾಷಣ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬಂಧನ
ಕೇಂದ್ರ ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ತಿರಸ್ಕಾರ: ಎಚ್‌ಡಿಕೆ ಆಕ್ರೋಶ